ಬೆಂಗಳೂರು : ಬಿಗ್ ಬಾಸ್ ಖ್ಯಾತಿಯ ಸಮೀರ್ ಆಚಾರ್ಯಅವರು ತಮ್ಮ ಪತ್ನಿಗೆ ಮನಬಂದಂತೆ ಥಳಿಸಿರುವ ಘಟನೆ ನಡೆದಿದೆ. ಇದೀಗ ಪತ್ನಿ ಠಾಣೆ ಮೆಟ್ಟಲೇರಿದ್ದಾರೆ.ಜೋಡಿ ಇದ್ದರೆ ಹೀಗಿರಬೇಕು ನೋಡಿ ಎನ್ನುವಂತೆ ಅನ್ಯೋನ್ಯವಾಗಿ ಕಾಣಿಸಿಕೊಂಡಿದ್ದರು. ಆದರೆ ಇಂದು ಘಟನೆ ನಡೆದ ನೋಡಿದ್ದೆಲ್ಲ ನೀಜವಲ್ಲ ಎಂಬಂತೆ ಭ್ರಮನಿರಸನಗೊಳಿಸಿದೆ.
ಇಂದು ಎಂದಿನಂತೆ ಮನೆಯಲ್ಲಿ ಕೆಲಸದಲ್ಲಿ ತೊಡಗಿದ್ದ ಶ್ರಾವಣಿ ಸಮೀರ್ ಆಚಾರ್ ತನ್ನ ಮಗಳು ಅಳುತ್ತಿದ್ದ ಕಾರಣಕ್ಕೆ ಗದರಿಸಿದ್ದಾರೆ. ಇದೇ ವಿಷಯಕ್ಕೆ ಸಮೀರ್ ಆಚಾರ್ಯ ಅವರ ತಂದೆ ತನ್ನ ಸೊಸೆ ಶ್ರಾವಣಿಗೆ ಬೈದಿದ್ದಾರೆ. ಇದೇ ವಿಚಾರ ಮಾತಿಗೆ ಮಾತು ಬೆಳೆದು ಜಗಳ ಪ್ರಾರಂಭವಾಗಿದೆ ಎಂದು ಹೇಳಲಾಗುತ್ತಿದೆ.ಬಳಿಕ ಸಮೀರ್ ಸೇರಿದಂತೆ ಅವರ ಅತ್ತೆ, ಮಾವ ಸೇರಿಕೊಂಡು ಮನಬಂದಂತೆ ಹಲ್ಲೆ ಮಾಡಿದ್ದಾರೆ ಎಂದು ಸಮೀರ್ ಆಚಾರ ಪತ್ನಿ ಆರೋಪಿಸಿ ಮಹಿಳಾ ಠಾಣೆ ಮೆಟ್ಟಿಲೇರಿದ್ದು. ಈ ವೇಳೆ ಇನ್ಸ್ಟಾಗ್ರಾಂನಲ್ಲಿ ಲೈವ್ ಹೋಗಿದ್ದ ಶ್ರಾವಣಿ ಫೋನ್ ಒಡೆದು ಹಾಕಿದ್ದಾರೆ. ಗಲಾಟೆ ವೇಳೆ ಶ್ರಾವಣಿ ಅವರಿಗೆ ಕೈ, ಮುಖಕ್ಕೆ ಗಾಯಗಳಾಗಿವೆ.
ಮತ್ತೊಂದೆಡೆ ಸಮೀರ್ ಆಚಾರ್ಯ ತಂದೆಯ ತಲೆಗೆ ಗಾಯಗಳಾಗಿವೆ. ಮತ್ತೊಂದೆಡೆ ಸಮೀರ್ ಆಚಾರ್ ತಂದೆ ಸೊಸೆ ಮೇಲೆ ದೂರು ನೀಡಲು ಮುಂದಾಗಿದ್ದಾರೆ ಎಂಬ ಸಂಗತಿ ಗೊತ್ತಾಗಿದೆ. ಆದರೆ ಈ ಬಗ್ಗೆ ಸಮೀರ್ ಆಚಾರ್ಯ ಪತ್ನಿ ಶ್ರಾವಣಿ ಅವರನ್ನು ಮಾತನಾಡಿಸಲು ಮುಂದಾದಾಗ ಮಾವ, ಅತ್ತೆ ಹಾಗೂ ಗಂಡ ಹಲ್ಲೆ ನಡೆಸಿದ್ದು ಸತ್ಯ ಎಂದಿದ್ದಾರೆ. ಆದರೆ ಈ ಬಗ್ಗೆ ಹೆಚ್ಚಿನ ಮಾಹಿತಿ ತಿಳಿಸಲು ನಿರಾಕರಿಸಿದರು.