ಬೆಂಗಳೂರು: ಮೀನುಗಾರಿಕೆ ಕ್ಷೇತ್ರಕ್ಕೆ ಸಿಎಂ ಸಿದ್ದರಾಮಯ್ಯ ಬಜೆಟ್ನಲ್ಲಿ 3 ಸಾವಿರ ಕೋಟಿ ಯೋಜನೆ ಘೋಷಿಸಿದ್ದಾರೆ. ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳುವ ಮೀನುಗಾರರನ್ನು ತುರ್ತು ಸಂದರ್ಭಗಳಲ್ಲಿ ರಕ್ಷಣೆಗೆ ಮಾಡುವುದಕ್ಕಾಗಿ ಅತ್ಯಾಧುನಿಕ ಸಮುದ್ರ ಆಂಬುಲೆನ್ಸ್ ಖರೀದಿಸಲಾಗುವುದು ಎಂದು ಅವರು ಘೋಷಣೆ ಮಾಡಿದ್ದಾರೆ.
ಹೊನ್ನಾವರ ಅಥವಾ ಕಾಸರಗೋಡದಲ್ಲಿ ಮೀನುಗಾರಿಕೆ ಸಂಶೋಧನಾ ಕೇಂದ್ರ ಸ್ಥಾಪನೆ ಮಾಡಲಾಗುವುದು. ಭದ್ರಾವತಿಯಲ್ಲಿ ಹೈಟೆಕ್ ಮೀನು ಮಾರುಕಟ್ಟೆ ಸ್ಥಾಪನೆ ಮಾಡಲಾಗುವುದು ಎಂದು ಸಿಎಂ ಘೋಷಣೆ ಮಾಡಿದರು.
ಇನ್ನು ವಿಪಕ್ಷ ಬಿಜೆಪಿ ನಾಯಕರು ಬಜೆಟ್ಗೆ ಬಹಿಷ್ಕಾರ ಹಾಕಿ ಹೊರನಡೆದರು. ಧಿಕ್ಕಾರ ಕೂಗುತ್ತಾ ಸದನದಿಂದ ಹೊರಬಂದ ಬಿಜೆಪಿ ಶಾಸಕರು, ‘ಏನಿಲ್ಲಾ ಏನಿಲ್ಲಾ, ಬುರುಡೆ ಬುರುಡೆ’ ಎಂದು ಕೂಗುತ್ತಾ ಸಭಾತ್ಯಾಗ ಮಾಡಿದರು. ವಿಧಾನಸಭೆ ಪ್ರವೇಶದ್ವಾರದ ಬಾಗಿಲಿಗೆ ಬಿಜೆಪಿ ಶಾಸಕರು ಪೋಸ್ಟರ್ ಅಂಟಿಸಿದರು.