ಬೆಂಗಳೂರು: ರಾಜಾಜಿನಗರ ವಿಧಾನಸಭಾ ಕ್ಷೇತ್ರದ ಶಾಸಕ, ಬಿಜೆಪಿ ಹಿರಿಯ ನಾಯಕ ಎಸ್. ಸುರೇಶ್‌ ಕುಮಾರ್ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಬಹಳ ಆಯಾಸಗೊಂಡಿದ್ದ ಸುರೇಶ್ ಕುಮಾರ್ ಅವರು ಅಪರೂಪದ ಜ್ವರಕ್ಕೆ ತುತ್ತಾಗಿದ್ದಾರೆ ಎಂದು ಹೇಳಲಾಗಿದೆ.ಅಪೋಲೋ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಸುರೇಶ್ ಕುಮಾರ್ ಅವರ ಮೆದುಳಿಗೂ ಜ್ವರ ತಗುಲಿರುವ ಕಾರಣ ICUನಲ್ಲಿ ಚಿಕಿತ್ಸೆ ನೀಡುತ್ತಿದ್ದೇವೆ ಎಂದು ಅಪೋಲೋ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ. ಹಿರಿಯ ನಾಯಕ ಎಸ್. ಸುರೇಶ್‌ಕುಮಾರ್ ಅವರು ಕಳೆದ ತಿಂಗಳು ಬೆಂಗಳೂರಿನಿಂದ ತಿರುಪತಿಗೆ ಸೈಕಲ್‌ನಲ್ಲಿ ಪ್ರಯಾಣ ಬೆಳೆಸಿದ್ದರು.

ಬೆಂಗಳೂರಿನಿಂದ ಮೈಸೂರಿಗೆ ನಡೆದ ಬಿಜೆಪಿ-ಜೆಡಿಎಸ್ ನಾಯಕರ ಪಾದಯಾತ್ರೆಯಲ್ಲೂ ಸುರೇಶ್ ಕುಮಾರ್ ಅವರು ಒಂದು ದಿನ ಭಾಗಿಯಾಗಿದ್ದರು. ಇದಾದ ಬಳಿಕ ಕಳೆದ ತಿಂಗಳಿಂದ ಸುರೇಶ್ ಕುಮಾರ್ ಬಹಳ ಆಯಾಸಗೊಂಡಿದ್ದರು ಎನ್ನಲಾಗಿದೆ.