ಬೆಂಗಳೂರು: ಕನ್ನಡಪರ ಸಂಘಟನೆಗಳು ಸೆಪ್ಟೆಂಬರ್ 29ರಂದು ಕರ್ನಾಟಕ ಬಂದ್ಗೆ ಕರೆ ನೀಡಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರಕ್ಕೆ ತಡೆಯೊಡ್ಡುವುದಾಗಿ ಕನ್ನಡ ಪಡ ಹೋರಾಟಗಾರ ವಾಟಾಳ್ ನಾಗರಾಜ್ ಹೇಳಿದ್ದಾರೆ.
ಎಲ್ಲ ರೈತ ಸಂಘಟನೆಗಳು ಬೆಂಬಲ ನೀಡಲಿವೆ ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಅಧ್ಯಕ್ಷ ಬಡಗಲಪುರ ನಾಗೇಂದ್ರ ತಿಳಿಸಿದ್ದಾರೆ.
ಕರ್ನಾಟಕ ಬಂದ್ಗೆ 100 ಕ್ಕೂ ಹೆಚ್ಚು ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ. ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಲು ಕನ್ನಡ ಪರ ಸಂಘಟನೆಗಳು ಶುಕ್ರವಾರ ಬಹು ರಾಜ್ಯ ಹೆದ್ದಾರಿಗಳನ್ನು ಬಂದ್ ಮಾಡಲು ಯೋಜಿಸಿವೆ.
ಕರ್ನಾಟಕ ಬಂದ್ನ ಸಂದರ್ಭದಲ್ಲಿ ಶುಕ್ರವಾರದಂದು ಬೆಂಗಳೂರು-ಹೊಸೂರು ಮುಖ್ಯರಸ್ತೆ, ಬೆಂಗಳೂರು-ಹೈದರಾಬಾದ್ ಹೆದ್ದಾರಿ, ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ರಸ್ತೆ, ಬೆಂಗಳೂರು-ಮೈಸೂರು ಹೆದ್ದಾರಿ, ಬೆಂಗಳೂರು-ತುಮಕೂರು ಹೆದ್ದಾರಿ, ಬೆಂಗಳೂರು-ಕನಕಪುರ ರಸ್ತೆ ಮತ್ತು ಮಂಡ್ಯ, ರಾಮನಗರ, ಮೈಸೂರಿನ ಪ್ರಮುಖ ರಸ್ತೆಗಳ ತಡೆ ನಡೆಸಲು ಚಿಂತನೆ ನಡೆದಿದೆ.