Bengaluru 22°C
Ad

ಕ್ಯಾಬ್‌ ಚಾಲಕನಿಂದ ಲೈಂಗಿಕ ದೌರ್ಜನ್ಯ: ಓಲಾ ಕಂಪನಿಗೆ 5 ಲಕ್ಷ ದಂಡ!

ಕ್ಯಾಬ್‌ ಚಾಲಕನಿಂದ 2019 ರಲ್ಲಿ ಲೈಂಗಿಕ ದೌರ್ಜನ್ಯಕ್ಕೊಳಗಾದ ಯುವತಿಗೆ ಪರಿಹಾರವಾಗಿ 5 ಲಕ್ಷ ರೂ ನೀಡುವಂತೆ ಓಲಾ ಕ್ಯಾಬ್ ಸಂಸ್ಥೆಗೆ ಹೈಕೋರ್ಟ್ ನಿರ್ದೇಶಿಸಿದೆ.

ಬೆಂಗಳೂರು : ಕ್ಯಾಬ್‌ ಚಾಲಕನಿಂದ 2019 ರಲ್ಲಿ ಲೈಂಗಿಕ ದೌರ್ಜನ್ಯಕ್ಕೊಳಗಾದ ಯುವತಿಗೆ ಪರಿಹಾರವಾಗಿ 5 ಲಕ್ಷ ರೂ ನೀಡುವಂತೆ ಓಲಾ ಕ್ಯಾಬ್ ಸಂಸ್ಥೆಗೆ ಹೈಕೋರ್ಟ್ ನಿರ್ದೇಶಿಸಿದೆ.

ಲೈಂಗಿಕ ಕಿರುಕುಳಕ್ಕೆ ಒಳಗಾಗಿದ್ದ ಸಂತ್ರಸ್ತ ಮಹಿಳೆ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಪೀಠ ಈ ಆದೇಶ ನೀಡಿದೆ. ಅರ್ಜಿದಾರರು 2019 ರಲ್ಲಿ ಲೈಂಗಿಕ ಕಿರುಕುಳಕ್ಕೆ ಒಳಗಾಗಿದ್ದರು ಮತ್ತು ಚಾಲಕನ ವಿರುದ್ಧ ಕ್ರಮ ಕೋರಿ ಓಲಾ ಮಾತೃ ಸಂಸ್ಥೆ ಎಎನ್‌ಐ ಟೆಕ್ನಾಲಜೀಸ್‌ಗೆ ನೀಡಿದ ದೂರನ್ನು ಆ ಸಂಸ್ಥೆ ಪರಿಗಣಿಸಿರಲಿಲ್ಲ.

ಆಂತರಿಕ ದೂರುಗಳ ಸಮಿತಿಯು ಈ ವಿಷಯದ ಬಗ್ಗೆ ವಿಚಾರಣೆ ನಡೆಸುವ ಅಧಿಕಾರವನ್ನು ಹೊಂದಿಲ್ಲ ಎಂದು ಸಂಸ್ಥೆಯ ಕಾನೂನು ಸಲಹೆಗಾರರು ಹೇಳಿದ್ದರು. ಇದನ್ನು ಪ್ರಶ್ನಿಸಿ ಅರ್ಜಿದಾರರು ಹೈಕೋರ್ಟ್ ಮೊರೆ ಹೋಗಿದ್ದರು. ಚಾಲಕರ ವರ್ತನೆಗೆ ಕಂಪೆನಿ ಓಲಾ ಕಂಪನಿ ಜವಾಬ್ದಾರರಾಗಬೇಕು.

ಆದರೆ, ಚಾಲಕನ ಕೃತ್ಯಕ್ಕೆ ನಾವು ಜವಾಬ್ದಾರರಲ್ಲ ಎಂಬ ಅಂಶ ಗೊತ್ತಾಗಿದ್ದರೆ ನಮ್ಮ ಕಕ್ಷಿದಾರರು ಕ್ಯಾಬ್‌ನ್ನು ಪಡೆದುಕೊಳ್ಳುತ್ತಿರಲಿಲ್ಲ. ಹೀಗಾಗಿ ಓಲಾ ಸಂಸ್ಥೆಯನ್ನು ಹೊಣೆಗಾರರನ್ನಾಗಿ  ಮಾಡಬೇಕು ಎಂದು ಪೀಠಕ್ಕೆ ವಕೀಲರು ವಿವರಿಸಿದ್ದರು. ಈ ಬೆನ್ನಲ್ಲೇ ಈಗ 5 ಲಕ್ಷ ಪರಿಹಾರ ನೀಡುವಂತೆ ಓಲಾ ಕಂಪನಿಗೆ ಹೈ ಕೋರ್ಟ್ ಸೂಚನೆ ನೀಡಿದೆ.

Ad
Ad
Nk Channel Final 21 09 2023