Bengaluru 25°C
Ad

ಯಾವುದೇ ಕಾರಣಕ್ಕೂ ಶಕ್ತಿ ಯೋಜನೆ ನಿಲ್ಲುವುದಿಲ್ಲ: ಸಚಿವ ರಾಮಲಿಂಗಾ ರೆಡ್ಡಿ

ಶಕ್ತಿ ಯೋಜನೆ  ನಿಲ್ಲುತ್ತದೆ ಎಂಬ ಆರೋಪಕ್ಕೆ ಸ್ಪಷ್ಟನೆ ನೀಡಿದ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಯಾವುದೇ ಕಾರಣಕ್ಕೂ ಶಕ್ತಿ ಯೋಜನೆಯನ್ನು ನಿಲ್ಲಿಸುವುದಿಲ್ಲ ಎಂದು ಹೇಳಿದ್ದಾರೆ.

ಬೆಂಗಳೂರು: ಶಕ್ತಿ ಯೋಜನೆ  ನಿಲ್ಲುತ್ತದೆ ಎಂಬ ಆರೋಪಕ್ಕೆ ಸ್ಪಷ್ಟನೆ ನೀಡಿದ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಯಾವುದೇ ಕಾರಣಕ್ಕೂ ಶಕ್ತಿ ಯೋಜನೆಯನ್ನು ನಿಲ್ಲಿಸುವುದಿಲ್ಲ ಎಂದು ಹೇಳಿದ್ದಾರೆ.

ನರೇಂದ್ರ ಮೋದಿ  ನೇತೃತ್ವದ ಕೇಂದ್ರ ಸರ್ಕಾರ ಮಾಡಿದ್ದ ಬೆಲೆ ಏರಿಕೆಯಿಂದ ಜನರು ತತ್ತರಿಸಿದ್ದರು. ಅವರಿಗೆ ಸಹಾಯ ಮಾಡುವುದಕ್ಕೆ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಗಿತ್ತು. ಇದರಿಂದ ಬಡ, ಮಧ್ಯಮ ವರ್ಗದವರಿಗೆ ಸಹಾಯ ಆಗಿದೆ.

ಕಾಂಗ್ರೆಸ್‌ ಸರ್ಕಾರ  ಗ್ಯಾರಂಟಿಗಳನ್ನು ಮತ ಪಡೆಯೋದಕ್ಕಾಗಿ ನೀಡಿಲ್ಲ. ಲೋಕಸಭಾ ಚುನಾವಣೆಯವರೆಗೆ ಅಂತ ನಿಗದಿ ಮಾಡಿಲ್ಲ ಎಂದು ಹೇಳಿದ್ದಾರೆ.

ನಮ್ಮ ಕಾಂಗ್ರೆಸ್ ಸರ್ಕಾರ ಇರುವವರೆಗೂ ಶಕ್ತಿ ಯೋಜನೆ ಇರುತ್ತದೆ. ಯಾರಿಗೂ ಅನುಮಾನ ಬೇಡ. ಮುಂದೆಯೂ ಸಹ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬರಲಿದ್ದು, ಆಗಲೂ ಶಕ್ತಿ ಯೋಜನೆ ಇರುತ್ತದೆ ಎಂದು ಸ್ಪಷ್ಟನೆ ನೀಡಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯನವರು  ಶಕ್ತಿ ಯೋಜನೆಗಾಗಿ ಬಜೆಟ್‌ ನಲ್ಲಿ ಸುಮಾರು 5,500 ಕೋಟಿ ರೂ. ಮೀಸಲಿಟ್ಟಿದ್ದಾರೆ. ಶಕ್ತಿ ಯೋಜನೆಗೆ ಯಾವುದೇ ಸಮಸ್ಯೆ ಇಲ್ಲ ಎಂದಿದ್ದಾರೆ.

Ad
Ad
Nk Channel Final 21 09 2023
Ad