ಬೆಂಗಳೂರು: ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಹುದ್ದೆಯಿಂದ ರಜನೀಶ್‌ ಗೋಯೆಲ್‌ ಅವರು ಜುಲೈ 31ರಂದು ನಿವೃತ್ತಿಯಾಗಲಿದ್ದು, ರಜನೀಶ್‌ ಪತ್ನಿ ಶಾಲಿನಿ ರಜನೀಶ್‌ ಅವರೇ ಪತಿಯ ಹುದ್ದೆ ಅಲಂಕರಿಸಲಿದ್ದಾರೆ. ರಾಜ್ಯದ 41ನೇ ಹಾಗೂ 5ನೇ ಮಹಿಳಾ ಮುಖ್ಯ ಕಾರ್ಯದರ್ಶಿಯಾಗಿ ಶಾಲಿನಿ ರಜನೀಶ್‌ ಅವರನ್ನು ನೇಮಕ ಮಾಡಲು ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.

ಶಾಲಿನಿ ರಜನೀಶ್‌ ಅವರು 1989ರ ಬ್ಯಾಚ್‌ನ ಐಎಎಸ್‌ ಅಧಿಕಾರಿಯಾಗಿದ್ದು ಪ್ರಸ್ತುತ ಅಭಿವೃದ್ಧಿ ಆಯುಕ್ತೆ ಹಾಗೂ ಸರ್ಕಾರದ ಹೆಚ್ಚುವರಿ ಮುಖ್ಯಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಆ.1ರಿಂದ 3 ವರ್ಷಗಳವರೆಗೆ ಅವರು ಮುಖ್ಯಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಲಿದ್ದಾರೆ ಎಂದು ತಿಳಿದು ಬಂದಿದೆ.