ಬೆಂಗಳೂರು: ಅಭಿವೃದ್ಧಿ ವಿಚಾರವಾಗಿ ಬೊಮ್ಮಾಯಿ ಸಲಹೆ ಪಡೆದಿದ್ದೇನೆ – ಶಿವಕುಮಾರ್‌

ಬೆಂಗಳೂರು: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬ್ರ್ಯಾಂಡ್ ಬೆಂಗಳೂರು ಪರಿಕಲ್ಪನೆಯಲ್ಲಿ ರಾಜ್ಯ ರಾಜಧಾನಿ ಬೆಂಗಳೂರು ಅಭಿವೃದ್ಧಿ ಕುರಿತು ಚರ್ಚೆ ನಡೆಸಿದರು.

ಮಾತುಕತೆ ವೇಳೆ ಬೆಂಗಳೂರು ಅಭಿವೃದ್ಧಿ ಕುರಿತು ಯಾವ ರೀತಿಯ ಯೋಜನೆ ಜಾರಿಗೆ ತರಬಹುದು ಎನ್ನುವುದು ಸೇರಿದಂತೆ ನಗರದ ಅಭಿವೃದ್ಧಿಗೆ ಪೂರಕವಾಗಿ ಅಗತ್ಯ ಸಲಹೆಗಳನ್ನು ಡಿಕೆ.ಶಿವಕುಮಾರ್ ಅವರು ಪಡೆದುಕೊಂಡರು.

ಈ ಹಿಂದೆ ಸಿಎಂ ಆಗಿ ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿ ಬಸವರಾಜ ಬೊಮ್ಮಾಯಿ ಕೆಲಸ ನಿರ್ವಹಿಸಿದ್ದರು. ಈಗ ತಾವು ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿರುವ ಕಾರಣ ಬೊಮ್ಮಾಯಿ ಅವರಿಂದ ಬ್ರ್ಯಾಂಡ್ ಬೆಂಗಳೂರು ಸಂಬಂಧ ಸಮಾಲೋಚನೆ ನಡೆಸಿ ಸಲಹೆಗಳನ್ನು ಪಡೆದುಕೊಂಡಿದ್ದಾರೆ.

ಮಾತುಕತೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಡಿ.ಕೆ. ಶಿವಕುಮಾರ್, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು 2 ವರ್ಷಗಳ ಕಾಲ ರಾಜ್ಯದ ಮುಖ್ಯಮಂತ್ರಿಗಳಾಗಿ, ಬೆಂಗಳೂರಿನ ಅಭಿವೃದ್ಧಿಗೆ ಕೆಲವು ಉತ್ತಮ ಯೋಜನೆ ಹಾಕಿಕೊಂಡಿದ್ದರು. ಆ ಯೋಜನೆಗಳು ಇನ್ನೂ ಜಾರಿಯಾಗಿಲ್ಲ. ಹೀಗಾಗಿ ಅವರನ್ನು ಭೇಟಿ ಮಾಡಿ ಅವರ ಸಲಹೆ, ಅಭಿಪ್ರಾಯ ಪಡೆದಿದ್ದೇನೆ ಎಂದು ಹೇಳಿದರು.

Ashika S

Recent Posts

ದೆಹಲಿಯಲ್ಲಿ ಬಿರುಗಾಳಿ: ಇಬ್ಬರು ಮೃತ್ಯು, 23 ಮಂದಿಗೆ ಗಾಯ

ಬಿರುಗಾಳಿಗೆ ಇಬ್ಬರು ಸಾವನ್ನಪ್ಪಿದ್ದು, 23 ಮಂದಿ ಗಾಯಗೊಂಡಿರುವ ಘಟನೆ ದೆಹಲಿಯಲ್ಲಿ ನಡೆದಿದೆ.

6 mins ago

ಹೆಚ್ಚಿನ ಫೀಸ್ ತೆಗೆದುಕೊಂಡರೆ ಖಾಸಗಿ ಶಾಲೆಗಳ ವಿರುದ್ಧ ಕ್ರಮ : ಬಂಗಾರಪ್ಪ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು ಪೋಷಕರು ತಮ್ಮ ಮಕ್ಕಳಿಗೆ ಮುಂದಿನ ವಿದ್ಯಾಭ್ಯಸದ ಬಗ್ಗೆ ಈಗಾಗಲೇ ಯೋಚಿಸುತ್ತಿದ್ದಾರೆ

14 mins ago

ವಿದ್ಯಾರ್ಥಿನಿಯ ಹತ್ಯೆ ಪ್ರಕರಣ: ಮರದ ಮೇಲೆ ಬಾಲಕಿಯ ರುಂಡ ಪತ್ತೆ

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ ಬಾಲಕಿ ರುಂಡ ಪತ್ತೆಯಾಗಿದೆ

20 mins ago

ಸೆಕೆಂಡ್ ​ಹ್ಯಾಂಡ್ ಕಾರು ವ್ಯಾಪಾರಿ ಮೇಲೆ ಹಲ್ಲೆ: ಆರೋಪಿಗಳ ಬಂಧನ

ಹಣಕ್ಕೆ ಬೇಡಿಕೆ ಇಟ್ಟು ನಗರದ ಹಾಗರಗಾ ಕ್ರಾಸ್ ಬಳಿಯ ಮನೆಯೊಂದರಲ್ಲಿ  ಸೆಕೆಂಡ್​ ಹ್ಯಾಂಡ್ ಕಾರು ವ್ಯಾಪಾರಿಯನ್ನು ಬೆತ್ತಲೆ ಮಾಡಿ ಹಲ್ಲೆ…

37 mins ago

ಹೈಕೋರ್ಟ್ ಅಡ್ವೋಕೇಟ್ ಚೈತ್ರಾ ಬಿ.ಗೌಡ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ

ಹೈಕೋರ್ಟ್ ಅಡ್ವೋಕೇಟ್ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಸಂಜಯನಗರ‌ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

37 mins ago

ಘಟ್ಟದ ಮೇಲಿನ ಶಾಸಕರನ್ನ ಅವಮಾನಿಸಿದ ಕರಾವಳಿಯ ಶಾಸಕ

ಘಟ್ಟದ ಕಡೆಗಳಲ್ಲಿ ರಸ್ತೆಗಳಿಗೆ ಎರಡು ಹಂಪ್ ಗಳನ್ನ ಹಾಕಿದ್ರೆ ಅಚೀವ್ ಮೆಂಟ್ ಅಂತೆ' ಘಟ್ಟದ ಮೇಲೆ‌ ಶಾಸಕರ ಅಚೀವ್ ಮೆಂಟ್…

46 mins ago