ಬೆಂಗಳೂರು: ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿಮಾನಿಗಳು ಬಿಜೆಪಿ ನಾಯಕ ಕುಮಾರ್ ಬಂಗಾರಪ್ಪ ನಿವಾಸಕ್ಕೆ ಮುತ್ತಿಗೆ ಹಾಕಿದ್ದಾರೆ.
Ad
ಮನೆ ಗೇಟ್ ಒಳಗೆ ನುಗ್ಗಿ ಕುಮಾರ್ ಬಂಗಾರಪ್ಪ ವಿರುದ್ಧ ಧಿಕ್ಕಾರ ಕೂಗಿದ್ದಾರೆ. ಪರಿಸ್ಥಿತಿ ವಿಕೋಪಕ್ಕೆ ತಿರುಗುತ್ತಿದ್ದಂತೆಯೇ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದಾರೆ.
Ad
ಶಿವರಾಜ್ ಕುಮಾರ್ ಹಾಗೂ ರಾಜ್ ಕುಮಾರ್ ಕುಟುಂಬದ ಬಗ್ಗೆ ಲಘುವಾಗಿ ಮಾತಾಡಿದ್ದಾರೆ. ಅದು ನಮಗೆ ನೋವಾಗಿದೆ ಅವರನ್ನ ಹೊರಗೆ ಕರೆಸಿ ಕ್ಷಮೆ ಕೇಳುವಂತೆ ಆಗ್ರಹಿಸಿ ಅಭಿಮಾನಿಗಳು ಆಕ್ರೋಶ ಹೊರಹಾಕಿದ್ದಾರೆ.
Ad
ಇನ್ನು ಕುಮಾರ್ ಬಂಗಾರಪ್ಪ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಓಡಿ ಹೋಗ್ತಿದ್ದ ಪ್ರತಿಭಟನಾಕಾರರನ್ನ ಹಿಡಿದು ಪೊಲೀಸರು ವಶಕ್ಕೆ ಪಡೆದಿದ್ದಾರೆ.
Ad
ಇತ್ತ ಈ ವೇಳೆ ಪೊಲೀಸರು ಹಾಗೂ ಶಿವಣ್ಣ ಅಭಿಮಾನಿಗಳ ನಡುವೆ ಮಾತಿನ ಚಕಮಕಿ ನಡೆದಿದೆ.
Ad
ಮನೆ ಬಾಗಿಲಿನಿಂದ ಹೊರ ಹೋಗುವಂತೆ ಪೊಲೀಸರು ನಟನ ಅಭಿಮಾನಿಗಳಿಗೆ ಎಚ್ಚರಿಕೆ ನೀಡಿದರು. ಬಳಿಕ ಕುಮಾರ್ ಬಂಗಾರಪ್ಪ ನಿವಾಸಕ್ಕೆ ಕೆಎಸ್ ಆರ್ ಪಿ ತುಕಡಿ ಆಗಮಿಸಿ ಹೆಚ್ಚಿನ ಭದ್ರತೆ ಒದಗಿಸಲಾಗಿದೆ.
Ad
Ad