ಬೆಂಗಳೂರು: ಸಿದ್ದರಾಮಯ್ಯ ನಾಳೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದು ಅಧಿಕೃತವಾಗಿದೆ. ನಾಳೆ ಬೆಳಗ್ಗೆ 11:30ಕ್ಕೆ ಸಿದ್ದರಾಮಯ್ಯ ಲೋಕಭವನಕ್ಕೆ ತೆರಳಿ ರಾಜ್ಯಪಾಲರನ್ನು ಭೇಟಿಯಾಗಿ ರಾಜೀನಾಮೆ ಸಲ್ಲಿಸಲಿದ್ದಾರೆ.

ರಾಜೀನಾಮೆ ನೀಡುವ ಮೊದಲು ಸಿದ್ದರಾಮಯ್ಯ ತಮ್ಮ ಮಂತ್ರಿಗಳಿಗೆ ಮತ್ತು ಆಪ್ತ ಶಾಸಕರಿಗೆ ಉಪಹಾರಕ್ಕೆ ಬರುವಂತೆ ಆಹ್ವಾನಿಸಿದ್ದಾರೆ. ಈ ಬ್ರೇಕ್‌ಫಾಸ್ಟ್‌ ಸಭೆಯ ಬಳಿಕ ಸಿಎಂ ಲೋಕಭವನಕ್ಕೆ ತೆರಳಿ ರಾಜೀನಾಮೆ ನೀಡಲಿದ್ದಾರೆ. ರಾಜೀನಾಮೆ ನೀಡಿದ ಬಳಿಕ ಸಿದ್ದರಾಮಯ್ಯ ಸುದ್ದಿಗೋಷ್ಠಿ ನಡೆಸಿ ಎಲ್ಲಾ ಪ್ರಶ್ನೆಗಳಿಗೆ ಉತ್ತರ ನೀಡಲಿದ್ದಾರೆ.