News Karnataka Kannada
Thursday, May 09 2024
ಬೆಂಗಳೂರು

ಕಾಂಗ್ರೆಸ್‌ ಸರ್ಕಾರ ಉರುಳಿಸಲು ಸಿಂಗಾಪುರದಲ್ಲಿ ಸ್ಕೆಚ್‌: ಬಾಂಬ್‌ ಸಿಡಿಸಿದ ಡಿ.ಕೆ. ಶಿವಕುಮಾರ್‌

Shivakumar says he has received positive advice from Gadkari
Photo Credit : News Kannada

ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹೊಸ ಬಾಂಬ್‌ ಸಿಡಿಸಿದ್ದಾರೆ. ವಿದೇಶದಲ್ಲಿ ಕುಳಿತು ಕರ್ನಾಟಕದಲ್ಲಿ ಬಹುಮತದ ಕಾಂಗ್ರೆಸ್‌ ಸರ್ಕಾರವನ್ನು ಬೀಳಿಸಲು ಪ್ರಯತ್ನ ನಡೆಯುತ್ತಿದೆ ಎಂದು ಹೇಳಿದ್ದು, ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.

ಬೆಂಗಳೂರಿನಲ್ಲಿ ಜುಲೈ 24ರಂದು ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್, ಸಿಂಗಾಪುರದಲ್ಲಿ ಕುಳಿತು ಸರ್ಕಾರದ ವಿರುದ್ಧ ತಂತ್ರ ರೂಪಿಸುತ್ತಿದ್ದಾರೆ. ನಮಗಿರುವ ಮಾಹಿತಿ ಪ್ರಕಾರ ಅವರೇನೋ ತಂತ್ರ ಮಾಡುತ್ತಿದ್ದಾರೆ. ಬೆಂಗಳೂರಿನಲ್ಲಿ ಮಾಡುವುದು ಬಿಟ್ಟು ಹೊರಗೆ ತಂತ್ರ ಮಾಡುತ್ತಿದ್ದಾರೆ ಎಂದು ಹೆಸರು ಹೇಳದೇ ಪರೋಕ್ಷವಾಗಿ ಕುಮಾರಸ್ವಾಮಿ ಸಿಂಗಾಪುರ ಪ್ರವಾಸದ ಬಗ್ಗೆ ಗಂಭೀರ ಆರೋಪ ಮಾಡಿದರು.

ಸಿಂಗಾಪುರದಲ್ಲಿ ಸರ್ಕಾರ ಬೀಳಿಸುವ ಕೆಲಸ ನಡೆಯುತ್ತಿದೆ. ಇದೆಲ್ಲಾ ಒಂದು ತಂತ್ರ. ಇದರ ಬಗ್ಗೆ ನಮಗೂ ಮಾಹಿತಿ ಬಂದಿದೆ‌. ಬೆಂಗಳೂರಿನಲ್ಲಿ ಆಪರೇಷನ್ ಮಾಡಿದ್ರೆ ಗೊತ್ತಾಗುತ್ತದೆ, ಸಿಂಗಾಪುರದಲ್ಲಿ ಕೂತು ಆಪರೇಷನ್ ಮಾಡುತ್ತಿದ್ದಾರೆ ಎಂದು ಸ್ಫೋಟಕ ಹೇಳಿಕೆ ನೀಡಿದರು.

ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಗುರುವಾರ ಅರೋಗ್ಯ ತಪಾಸಣೆಗೆಂದು ಸಿಂಗಾಪುರಕ್ಕೆ ಹೋಗಿದ್ದಾರೆ ಎನ್ನಲಾಗಿದೆ. ಕುಮಾರಸ್ವಾಮಿ ಅವರು ಸಿಂಗಾಪುರಕ್ಕೆ ಹೋಗಿರುವುದು ಇದು ಮೊದಲಲ್ಲ. ಹಿಂದೆಯೂ ಹಲವು ಬಾರಿ ಸಿಂಗಾಪುರಕ್ಕೆ ಹೋಗಿದ್ದರು. ಅಲ್ಲದೇ ಸಿಂಗಾಪುರದಲ್ಲಿ ಇದ್ದಗಾಗಲೇ ಇತ್ತ ಕಾಂಗ್ರೆಸ್​ ಹಾಗೂ ಜೆಡಿಎಸ್​ ಮೈತ್ರಿ ಸರ್ಕಾರ ಅಲುಗಾಡಿತ್ತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು