ಬೆಂಗಳೂರು: ತನ್ನ ತಂದೆ, ತಾಯಿಯನ್ನು ಪುತ್ರನೇ ಕೊಲೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ಬುಧವಾರ ನಡೆದಿದೆ. ನವೀನ್ ಚಂದ್ರ ಭಟ್ (60), ಡಾ.ಶ್ಯಾಮಲಾ ಭಟ್(55) ಕೊಲೆಯಾದವರು.
ನಗರದ HAL ಪೊಲೀಸ್ ಠಾಣಾ ವ್ಯಾಪ್ತಿಯ ವಿಜ್ಞಾನ ನಗರದ ಆದರ್ಶ ವಿಸ್ತಾ ಅಪಾರ್ಟ್‌ಮೆಂಟ್ ನಲ್ಲಿ ಘಟನೆ ನಡೆದಿದೆ. ಹೆತ್ತವರನ್ನು ಹತ್ಯೆಗೈದ ಆರೋಪಿ ರೋಹನ್ ಭಟ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ನಿವೃತ್ತ ನೆವಿ ಕ್ಯಾಪ್ಟನ್ ನವೀನ್ ಚಂದ್ರ ಭಟ್ ಹಾಗೂ ದಂತ ವೈದ್ಯೆಯಾಗಿರುವ ಡಾ.ಶ್ಯಾಮಲಾ ಅವರಿಗೆ ಪುತ್ರ ರೋಹನ್ ಚಾಕುವಿನಿಂದ ಇರಿದಿದ್ದಾನೆ ಎನ್ನಲಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೆ ಇಬ್ಬರೂ ಮೃತಪಟ್ಟಿದ್ದಾರೆ.

