Bengaluru 30°C
Ad

ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ​ದ ಹಣದಲ್ಲಿ ಸೋನಿಯಾ ಗಾಂಧಿಗೂ ಪಾಲು ಸಿಕ್ಕಿದೆ : ಆರ್‌.ಅಶೋಕ್

ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಕೋಟ್ಯಂತರ ರೂ. ಹಗರಣ ನಡೆದರೂ ಅವರಿಗೆ ತಿಳಿದಿಲ್ಲ. ಕೂಡಲೇ ಸಿಎಂ ರಾಜೀನಾಮೆ ನೀಡಬೇಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದ್ದಾರೆ.

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಕೋಟ್ಯಂತರ ರೂ. ಹಗರಣ ನಡೆದರೂ ಅವರಿಗೆ ತಿಳಿದಿಲ್ಲ. ಕೂಡಲೇ ಸಿಎಂ ರಾಜೀನಾಮೆ ನೀಡಬೇಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹಿಸಿದ್ದಾರೆ.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧಿಕಾರಿ, ಮೃತ ಪಿ.ಚಂದ್ರಶೇಖರನ್‌ ಅವರ ಕುಟುಂಬ ಕಷ್ಟದಲ್ಲಿದೆ.

ಹಣಕಾಸು ಇಲಾಖೆಯಿಂದ ಎಲ್ಲ ಮಾಹಿತಿ ಪಡೆದಿದ್ದರೂ ಸಚಿವ ಬಿ.ನಾಗೇಂದ್ರ ಅವರ ರಾಜೀನಾಮೆ ಮಾತ್ರ ಪಡೆಯುತ್ತಿಲ್ಲ. ಸರ್ಕಾರದ ಹಣವನ್ನು ಯಾರು ಹೇಗೆ ಬೇಕಾದರೂ ವರ್ಗಾವಣೆ ಮಾಡಬಹುದು ಎಂಬುದು ಇದರ ಅರ್ಥ. ಈ ಹಣದಲ್ಲಿ ಸೋನಿಯಾ ಗಾಂಧಿ ಅವರಿಗೂ ಪಾಲು ಸಿಕ್ಕಿದೆ ಎನ್ನುವುದು ನನ್ನ ಅನುಮಾನ ಎಂದು ಹೇಳಿದ್ದಾರೆ.

ಆಂಧ್ರಪ್ರದೇಶದ ಜ್ಯುಬಿಲಿ ಹಿಲ್ಸ್‌ ಬ್ಯಾಂಕ್‌ಗೆ ಹಣವನ್ನು ವರ್ಗಾವಣೆ ಮಾಡಲಾಗಿದೆ. ಜೊತೆಗೆ 9 ಐಟಿ ಕಂಪನಿಗಳಿಗೆ ವರ್ಗಾಯಿಸಲಾಗಿದೆ. ಈ ಹಣವನ್ನು ದಲಿತರ ಶ್ರೇಯಸ್ಸಿಗಾಗಿ ಇಡಲಾಗಿತ್ತು. ಇಂತಹ ಹಣವನ್ನೇ ಕಾಂಗ್ರೆಸ್‌ನವರು ಲೂಟಿ ಮಾಡುತ್ತಿದ್ದಾರೆ. ಇಲ್ಲಿ ಯಾರು ಮುಖ್ಯಮಂತ್ರಿ ಎಂಬುದೇ ಅರ್ಥವಾಗುತ್ತಿಲ್ಲ. ಇಲ್ಲಿ ಇಬ್ಬರು ಮುಖ್ಯಮಂತ್ರಿ ಹಾಗೂ ಸೂಪರ್‌ ಸಿಎಂ ಇದ್ದಾರೆ ಎಂದರು.

ಸಮಪಾಲು, ಸಮಬಾಳು ಎಂಬಂತೆ ಸಚಿವ ಸಂಪುಟದಲ್ಲಿರುವ ಎಲ್ಲರೂ ಹಣವನ್ನು ಸಮಪಾಲು ಮಾಡಿಕೊಂಡಿದ್ದಾರೆ. ರಾಜ್ಯದ ಆರ್ಥಿಕ ಪರಿಸ್ಥಿತಿ ಹಾಳು ಮಾಡಿ, 187 ಕೋಟಿ ರೂ. ಲೂಟಿ ಮಾಡಲಾಗಿದೆ. ತಮ್ಮ ಕಣ್ಣಿನ ಕೆಳಗೆ ಇವೆಲ್ಲ ನಡೆಯುತ್ತಿದ್ದರೂ ಸಿದ್ದರಾಮಯ್ಯ ಮೂಕ ಪ್ರೇಕ್ಷಕರಂತೆ ನಿಂತಿದ್ದಾರೆ ಎಂದರು.

ಹಣ ವರ್ಗಾವಣೆಯಾಗಿರುವ ಐಟಿ ಕಂಪನಿಗಳು ಕಾಂಗ್ರೆಸ್ಸಿಗರ ಹಿಂಬಾಲಕರಾಗಿದ್ದಾರೆ. ಹೈದರಾಬಾದಿನ ಜ್ಯೂಬ್ಲಿ ಹಿಲ್ಸ್ ವರೆಗೂ ಯಾರೂ ಹೋಗುವುದಿಲ್ಲ ಎಂಬ ಕಾರಣಕ್ಕೆ ಅಲ್ಲಿಗೆ ವರ್ಗಾವಣೆ ಮಾಡಲಾಗಿದೆ. ಕಾನೂನು ಪ್ರಕಾರ ಎಲ್ಲ ಅವಕಾಶ ಬಳಸಿಕೊಂಡು ಬಿಜೆಪಿ ಹೋರಾಟ ಮಾಡಲಿದೆ. ಈ ಕುರಿತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರಿಗೂ ದಾಖಲೆ ಸಮೇತ ಮಾಹಿತಿ ನೀಡಲಾಗಿದೆ ಎಂದು ತಿಳಿಸಿದರು.

 

 

 

Ad
Ad
Nk Channel Final 21 09 2023
Ad