ಬೆಂಗಳೂರು : ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ಮಂಜೂರು ಮಾಡಿರುವ ಹಿನ್ನೆಲೆಯಲ್ಲಿ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ.
ಸೂರಜ್ ವಿರುದ್ಧ ದಾಖಲಾದ 2 ಎಫ್‌ಐಆರ್ ಪೈಕಿ ಚೇತನ್ ಎಂಬುವರು ನೀಡಿದ ದೂರಿನಲ್ಲಿ ಷರತ್ತು ಬದ್ಧ ಜಾಮೀನು ಸಿಕ್ಕರೆ, ಎಂ.ಎಲ್. ಶಿವಕುಮಾರ್ ನೀಡಿದ ದೂರಿನಲ್ಲಿ ನಿರೀಕ್ಷಣಾ ಜಾಮೀನು ಮಂಜೂರಾಗಿದೆ. ಈ ಹಿನ್ನೆಲೆಯಲ್ಲಿ ಕಳೆದ ಒಂದು ತಿಂಗಳಿನಿಂದ ಅನುಭವಿಸುತ್ತಿರುವ ಸೆರೆಮನೆ ವಾಸದಿಂದ ಮಂಗಳವಾರ ಬಿಡುಗಡೆಯಾಗುವ ನಿರೀಕ್ಷೆಯಿದೆ.

