Bengaluru 27°C

ಸಿಟಿಯಲ್ಲಿ ಕಳ್ಳತನ ಮಾಡಿ ಕಾಡಿನಲ್ಲಿ ವಾಸ: ಆರೋಪಿ ಪೊಲೀಸರ ವಶಕ್ಕೆ

ಸಿಟಿಯಲ್ಲಿ ಕಳ್ಳತನ ಮಾಡಿ ಕಾಡನ್ನೇ ವಾಸಸ್ಥಾನ ಮಾಡಿಕೊಂಡು ಪೊಲೀಸರಿಗೆ ಸುಳಿವು ಸಿಗದಂತೆ ಕಣ್ಮರೆಯಾಗುತ್ತಿದ್ದ ಕಳ್ಳನನ್ನು ಬೆಂಗಳೂರಿನಲ್ಲಿ ಬಂಧಿಸಲಾಗಿದೆ.

ಬೆಂಗಳೂರು: ಸಿಟಿಯಲ್ಲಿ ಕಳ್ಳತನ ಮಾಡಿ ಕಾಡನ್ನೇ ವಾಸಸ್ಥಾನ ಮಾಡಿಕೊಂಡು ಪೊಲೀಸರಿಗೆ ಸುಳಿವು ಸಿಗದಂತೆ ಕಣ್ಮರೆಯಾಗುತ್ತಿದ್ದ ಕಳ್ಳನನ್ನು ಬೆಂಗಳೂರಿನಲ್ಲಿ ಬಂಧಿಸಲಾಗಿದೆ.


ನರಸಿಂಹ ರೆಡ್ಡಿ ಬಂಧಿತ ಆರೋಪಿ. ಈತ ಒಂಟಿ ಮನೆಗಳು, ಬೀಗ ಹಾಕಿದ ಮನೆಗಳಲ್ಲಿ ಯಾರು ಇಲ್ಲದ ವೇಳೆ ಕಳ್ಳತನ ಮಾಡುತ್ತಿದ್ದ. ಇತ್ತೀಚಿಗೆ ಗಿರಿನಗರ ವ್ಯಾಪ್ತಿಯಲ್ಲಿ ಬರುವ ಮನೆಯೊಂದರಲ್ಲಿ ಕಳ್ಳತನ ಮಾಡಿದ್ದ. ಕದ್ದ ಆಭರಣ ಸಮೇತ ಕಾಡಿಗೆ ಎಸ್ಕೇಪ್ ಆಗಿದ್ದ. ಆರೋಪಿ ಎರಡು ಕಾಡುಗಳನ್ನು ತನ್ನ ಆವಾಸಸ್ಥಾನ ಮಾಡಿಕೊಂಡಿದ್ದ. ಈತ ನೆಲಮಂಗಲ ಬಳಿಯ ಗುಡೇಮಾರನಹಳ್ಳಿ ಹಾಗೂ ಕೃಷ್ಣಗಿರಿಯ ಫಾರೆಸ್ಟ್ನಲ್ಲಿ ವಾಸ ಮಾಡುತ್ತಿದ್ದ. ಕಾಡಿನ ಬಂಡೆಗಳ ಮೇಲೆ ಮಲಗುತ್ತಿದ್ದ.


ಆರೋಪಿಯನ್ನು ಬೆನ್ನತ್ತಿದರೆ, ‘ಪೊಲೀಸರು ನನ್ನ ಹಿಂದೆ ಬರಬೇಕು, ಬೆನ್ನತ್ತಬೇಕು’ ಎಂದು ಚಾಲೆಂಜ್ ಹಾಕಿ ಪೊಲೀಸರ ಜೊತೆ ಕಣ್ಣಾಮುಚ್ಚಾಲೆ ಆಡಿ ತಪ್ಪಿಸಿಕೊಳ್ಳುತ್ತಿದ್ದ. ಹೀಗೆ ಗುಡೇಮಾರನಹಳ್ಳಿ ಕಾಡಿನಲ್ಲಿದ್ದ ವೇಳೆ ಆರೋಪಿ ನರಸಿಂಹ ರೆಡ್ಡಿಯನ್ನು ಗಿರಿನಗರ ಪೊಲೀಸರು ಬಂಧಿಸಿದ್ದಾರೆ.


ಮಾಗಡಿಯ ಸೋಲೂರು ಮೂಲದ ಬಂಧಿತ ಆರೋಪಿ ನರಸಿಂಹ ರೆಡ್ಡಿ ಸುಮಾರು 50ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಭಾಗಿಯಾಗಿದ್ದ. ಈತನಿಂದ 70 ಲಕ್ಷ ರೂ. ಮೌಲ್ಯದ ಒಂದು ಕೆಜಿ ಚಿನ್ನಾಭರಣವನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.


Nk Channel Final 21 09 2023