Bengaluru 22°C
Ad

ಇಂಧನ ಏರಿಸಿದ ದರ ಹಿಂಪಡೆಯುವವರೆಗೆ ಹೋರಾಟ : ಬಿವೈ ವಿಜಯೇಂದ್ರ

ಕಾಂಗ್ರೆಸ್ ಸರ್ಕಾರ  ಪೆಟ್ರೋಲ್ ಬೆಲೆ ಲೀಟರ್‌ಗೆ 3 ರೂ., ಡೀಸೆಲ್ ಬೆಲೆ 3.5 ರೂ. ಹೆಚ್ಚಳದ ಅವಿವೇಕದ ಮತ್ತು ಜನವಿರೋಧಿ ನಿರ್ಧಾರವನ್ನು ಕೈಗೊಂಡಿದೆ. ಏರಿಸಿದ ದರ ಹಿಂಪಡೆಯುವವರೆಗೆ ಬಿಜೆಪಿ ಹೋರಾಟ ಮಾಡಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಘೋಷಣೆ ಮಾಡಿದ್ದಾರೆ.

ಬೆಂಗಳೂರು: ಕಾಂಗ್ರೆಸ್ ಸರ್ಕಾರ  ಪೆಟ್ರೋಲ್ ಬೆಲೆ ಲೀಟರ್‌ಗೆ 3 ರೂ., ಡೀಸೆಲ್ ಬೆಲೆ 3.5 ರೂ. ಹೆಚ್ಚಳದ ಅವಿವೇಕದ ಮತ್ತು ಜನವಿರೋಧಿ ನಿರ್ಧಾರವನ್ನು ಕೈಗೊಂಡಿದೆ. ಏರಿಸಿದ ದರ ಹಿಂಪಡೆಯುವವರೆಗೆ ಬಿಜೆಪಿ ಹೋರಾಟ ಮಾಡಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಘೋಷಣೆ ಮಾಡಿದ್ದಾರೆ.

ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಸಿದ ಸರ್ಕಾರದ ಕ್ರಮವನ್ನು ಖಂಡಿಸಿ ತಮ್ಮ ನೇತೃತ್ವದಲ್ಲಿ ಇಂದು ಸ್ವಾತಂತ್ರ್ಯ ಉದ್ಯಾನವನದ ಬಳಿ ನಡೆದ ಬೃಹತ್ ಪ್ರತಿಭಟನೆಯಲ್ಲಿ ಪ್ರತಿಭಟನಾಕಾರರನ್ನು ಉದ್ದೇಶಿಸಿ ಅವರು ಮಾತನಾಡಿದರು.

ನಾವು ವಿಪಕ್ಷವಾಗಿ ಜನರ ಪರವಾಗಿ ಧ್ವನಿ ಎತ್ತಬೇಕಿದೆ. ರಾಜ್ಯದ ರೈತರು, ಬಡವರು, ಜನಸಾಮಾನ್ಯರಿಗೆ ನ್ಯಾಯ ಕೊಡಿಸುವ ಕೆಲಸವನ್ನು ನಾವು ನೀವೆಲ್ಲರೂ ಸೇರಿ ಮಾಡಬೇಕಿದೆ ಎಂದು ತಿಳಿಸಿದರು.

ಕಾಂಗ್ರೆಸ್  ಸರ್ಕಾರಕ್ಕೆ ಕಳೆದ ಒಂದು ವರ್ಷದ ಅಧಿಕಾರದಲ್ಲಿ ಒಂದೇ ಒಂದು ರೂಪಾಯಿಯನ್ನೂ ಅಭಿವೃದ್ಧಿಗೆ ಕೊಡಲು ಸಾಧ್ಯವಾಗಿಲ್ಲ. ಮುದ್ದೇಬಿಹಾಳದ ಕಾಂಗ್ರೆಸ್ ಶಾಸಕ ನಾಡಗೌಡರು ಅಭಿವೃದ್ಧಿ ಕಾರ್ಯ ಸ್ಥಗಿತವಾದ ಕುರಿತು ಹೇಳಿಕೆ ಕೊಟ್ಟಿದ್ದಾರೆ.

ಬಿಜೆಪಿ ಸರ್ಕಾರ ಇದ್ದಾಗ ಬಸವರಾಜ ಬೊಮ್ಮಾಯಿಯವರು ಮುಖ್ಯಮಂತ್ರಿ ಸ್ಥಾನದಿಂದ ಇಳಿಯುವಾಗ ರಾಜ್ಯದಲ್ಲಿ ಕಂದಾಯ ಮಿಗತೆ ಇತ್ತು. ಹೆಚ್ಚು ಸಾಲಗಳೂ ಇರಲಿಲ್ಲ. ಸಿದ್ದರಾಮಯ್ಯನವರು ಮುಖ್ಯಮಂತ್ರಿ ಆದ ಒಂದೇ ಒಂದು ವರ್ಷದಲ್ಲಿ ಕರ್ನಾಟಕ ರಾಜ್ಯದ ಆರ್ಥಿಕ ಪರಿಸ್ಥಿತಿ ಸಂಪೂರ್ಣ ಹದಗೆಟ್ಟಿದೆ.

ರಾಜ್ಯ ದಿವಾಳಿ ಅಂಚಿಗೆ ಹೋಗಿದೆ. ಹಾಗಿದ್ದರೆ ಯಾವ ಪುರುಷಾರ್ಥಕ್ಕೆ ಆಡಳಿತ ನಡೆಸುತ್ತಿದ್ದೀರಿ ಎಂದು ಪ್ರಶ್ನಿಸಿದರು. ಬೆಲೆ ಏರಿಕೆ, ಹಣದುಬ್ಬರದ ಕುರಿತು ತಿಳಿದಿದ್ದರೂ ಅನುಭವಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು  ಲೋಕಸಭಾ ಚುನಾವಣೆ  ನಂತರ ಪೆಟ್ರೋಲ್, ಡೀಸೆಲ್ ದರ ಹೆಚ್ಚಳದ ಈ ಜನವಿರೋಧಿ ನಿರ್ಧಾರ ಮಾಡಿದ್ದಾರೆ ಎಂದರು.

Ad
Ad
Nk Channel Final 21 09 2023
Ad