ಬೆಂಗಳೂರು: ಬೆಂಗಳೂರಿನ ಪ್ರೌಢಶಾಲೆಯೊಂದರಲ್ಲಿ 9ನೇ ತರಗತಿ ವಿದ್ಯಾರ್ಥಿಗೆ ಪಿವಿಸಿ ಪೈಪ್‌ನಿಂದ ಬಾಸುಂಡೆ ಬರುವಂತೆ ಥಳಿಸಿರುವ ಘಟನೆ ನಡೆದಿದೆ.

ಬೆಂಗಳೂರಿನ ಸುಂಕದಕಟ್ಟೆಯ ಖಾಸಗಿ ಶಾಲೆಯಲ್ಲಿ ಪಿವಿಸಿ ಪೈಪ್‌ನಿಂದ 9ನೇ ತರಗತಿ ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಥಳಿಸಲಾಗಿದೆ. ಎರಡು ದಿನ ಶಾಲೆಗೆ ಬರದಿದ್ದಕ್ಕೆ ಪಿವಿಸಿ ಪೈಪ್ ಬಳಸಿ ಈ ಪರಿಯಲ್ಲಿ ಹಲ್ಲೆ ನಡೆಸಲಾಗಿದೆ ಎಂದು ತಿಳಿದುಬಂದಿದೆ.

9ನೇ ತರಗತಿ ವಿದ್ಯಾರ್ಥಿ ಎರಡು ದಿನ ಶಾಲೆಗೆ ಬಂದಿರಲಿಲ್ಲ. ಮಾರನೆ ದಿನ ಶಾಲೆಗೆ ಹೋಗುತ್ತಿದ್ದಂತೆ ಶಿಕ್ಷಕಿ ಹಾಗೂ ಪ್ರಾಂಶುಪಾಲ ರಾಕೇಶ್ ಕುಮಾರ್ ವಿದ್ಯಾರ್ಥಿಯನ್ನು ಪಿವಿಸಿ ಪೈಪ್‌ನಿಂದ ಹೊಡೆದಿದ್ದು, ಗಂಭೀರವಾಗಿ ಹಲ್ಲೆಗೊಳಗಾಗಿರುವ ವಿದ್ಯಾರ್ಥಿ ಆಸ್ಪತ್ರೆಗೆ ದಾಖಲಾಗಿದ್ದಾನೆ.

ವಿದ್ಯಾರ್ಥಿ ಸ್ಥಿತಿ ಗಂಭೀರವಾಗಿದೆ. ಈ ಬಗ್ಗೆ ವಿದ್ಯಾರ್ಥಿಯ ತಾಯಿ ಕಾಮಾಕ್ಷಿಪಾಳ್ಯ ಠಾಣೆಯಲ್ಲಿ ದೂರು ನೀಡಿದ್ದಾರೆ. ಶಿಕ್ಷಕಿ ಹಾಗೂ ಪ್ರಾಂಶುಪಾಲ ರಾಕೇಶ್ ಕುಮಾರ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ಘಟನೆ ಸಂಬಂಧ ಪ್ರಕರಣ ದಾಖಲಾಗಿದೆ.