ಬೆಂಗಳೂರು: ಡೆತ್ ನೋಟ್ ಬರೆದಿಟ್ಟು ಜಮ್ಮು-ಕಾಶ್ಮೀರ ಮೂಲದ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವುದು ನಗರ ಹೊರವಲಯದ ಯಲಹಂಕದಲ್ಲಿ ನಡೆದಿದೆ. ನನ್ನ ಸಾವಿಗೆ ನಾನೇ ಕಾರಣ ಎಂದು ಬರೆದಿಟ್ಟು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ತನ್ವೀರ್ ಮೃತ ವಿದ್ಯಾರ್ಥಿ. ಪ್ರತಿಷ್ಠಿತ ರೇವಾ ಯೂನಿವರ್ಸಿಟಿಯಲ್ಲಿ ಬಿಎಸ್ಸಿ ದ್ವಿತೀಯ ವರ್ಷ ವ್ಯಾಸಂಗ ಮಾಡುತ್ತಿದ್ದ ತನ್ವೀರ್, ಭಾನುವಾರ ಇದ್ದಕ್ಕಿದ್ದಂತೆ ಪಿ.ಜಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪಿ.ಜಿಯಲ್ಲಿನ ಕೆಲ ವಿದ್ಯಾರ್ಥಿಗಳು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ನಂತರ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
ಮರಣೋತ್ತರ ಪರೀಕ್ಷೆಗಾಗಿ ಮೃತ ದೇಹವನ್ನು ಯಲಹಂಕ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದು, ತನ್ವೀರ್‌ನ ಪೋಷಕರಿಗೆ ಮಾಹಿತಿ ನೀಡಲಾಗಿದೆ. ಹೀಗಾಗಿ ಪೋಷಕರು ಕಾಶ್ಮೀರದಿಂದ ಬರುತ್ತಿದ್ದಾರೆ. ಯಲಹಂಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Ad