Bengaluru 27°C
Ad

ಲೋಕಸಭಾ ಚುನಾವಣೆ: ಡಾ. ಮಂಜುನಾಥ್​ ಗೆಲುವಿಗೆ ಹರಕೆ ಹೊತ್ತ ಸುಧಾಮೂರ್ತಿ

ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಬಿಜೆಪಿಯಿಂದ ಸ್ಪರ್ಧೆ ಮಾಡಿರುವ ಖ್ಯಾತ ಹೃದ್ರೋಗ ತಜ್ಞ ಡಾ ಸಿಎನ್ ಮಂಜುನಾಥ್ ಅವರ ಗೆಲುವಿಗೆ ರಾಜ್ಯಸಭಾ ಸದಸ್ಯೆ, ಇನ್ಫೋಸಿಸ್ ಸಹ ಸಂಸ್ಥಾಪಕಿ ಸುಧಾಮೂರ್ತಿ ಅವರು ಹರಕೆ ಹೊತ್ತುಕೊಂಡಿದ್ದಾರೆ ಎಂಬ ಮಾಹಿತಿಯನ್ನು ಸ್ವತಃ ಡಾ ಮಂಜುನಾಥ್ ಅವರು ಕಾರ್ಯಕ್ರಮವೊಂದರಲ್ಲಿ ಬಹಿರಂಗಪಡಿಸಿದ್ದಾರೆ.

ಬೆಂಗಳೂರು: ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯ ಫಲಿತಾಂಶ ಜೂನ್ 4ರಂದು ತಿಳಿಯಲಿದೆ. ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಬಿಜೆಪಿಯಿಂದ ಸ್ಪರ್ಧೆ ಮಾಡಿರುವ ಖ್ಯಾತ ಹೃದ್ರೋಗ ತಜ್ಞ ಡಾ ಸಿಎನ್ ಮಂಜುನಾಥ್ ಅವರ ಗೆಲುವಿಗೆ ರಾಜ್ಯಸಭಾ ಸದಸ್ಯೆ, ಇನ್ಫೋಸಿಸ್ ಸಹ ಸಂಸ್ಥಾಪಕಿ ಸುಧಾಮೂರ್ತಿ ಅವರು ಹರಕೆ ಹೊತ್ತುಕೊಂಡಿದ್ದಾರೆ ಎಂಬ ಮಾಹಿತಿಯನ್ನು ಸ್ವತಃ ಡಾ ಮಂಜುನಾಥ್ ಅವರು ಕಾರ್ಯಕ್ರಮವೊಂದರಲ್ಲಿ ಬಹಿರಂಗಪಡಿಸಿದ್ದಾರೆ.

ಡಾ. ಸಿಎನ್​ ಮಂಜುನಾಥ್​ ಅವರು ಗೆದ್ದರೆ ಮಂತ್ರಾಲಯದಿಂದ ಸುಮಾರು ಆರು ಕಿಲೋ ಮೀಟರ್ ಇರುವ ಒಂದು ಸ್ಥಳದಿಂದ ಕಾಲ್ನಡಿಗೆ ಮೂಲಕ ಹೋಗಿ ರಾಯರ ಪಾದ ಪೂಜೆ ಮಾಡುತ್ತೇನೆ ಎಂದು ಸುಧಾಮೂರ್ತಿ ಅವರು ಹರಕೆ ಹೊತ್ತಿದ್ದಾರೆ.

ರಾಜ್ಯಸಭಾ ಸದಸ್ಯೆಯಾಗಿ, ಅದರಲ್ಲೂ ಇನ್ಫೋಸಿಸ್​ ನಂತಹ ಬಹುರಾಷ್ಟ್ರೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆಯ ಸಹ ಸಂಸ್ಥಾಪಕಿಯಾಗಿ ಓರ್ವ ಅಭ್ಯರ್ಥಿಯ ಗೆಲುವಿಗೆ ಹರಕೆ ಹೊತ್ತುಕೊಂಡಿದ್ದಾರೆ ಎನ್ನುವುದು ನಿಜಕ್ಕೂ ಅಚ್ಚರಿ ಮೂಡಿಸಿದೆ.

 

Ad
Ad
Nk Channel Final 21 09 2023
Ad