ಬೆಂಗಳೂರು: ಇಂದು (ಏ.05) ಬೆಂಗಳೂರಿನ ಮಲ್ಲೇಶ್ವರಂನ ಬಿಜೆಪಿ ಕಚೇರಿಯಲ್ಲಿ ಸಂಸದೆ ಸುಮಲತಾ ಅಂಬರೀಶ್ ಮತ್ತು ಕ್ರಿಕೆಟಿಗ ದೊಡ್ಡ ಗಣೇಶ ಕಮಲ ಹಿಡಿದಿದ್ದಾರೆ. ಮಂಡ್ಯ ಜಿಲ್ಲೆಯ ಸಮಗ್ರ ಅಭಿವೃದ್ಧಿಯೇ ನನ್ನ ಮೂಲ ಮಂತ್ರವಾಗಿದೆ.
ಮೋದಿ ಮತ್ತೊಮ್ಮೆ ಪ್ರಧಾನಿಯಾಗಲಿ ಎಂಬ ಆಶಯದಿಂದ ಬಿಜೆಪಿಗೆ ಸೇರ್ಪಡೆಯಾಗುತ್ತಿದ್ದೇನೆ. ಮಂಡ್ಯದ ನನ್ನ ಅಭಿಮಾನಿಗಳು, ನಟ ದಿ.ಅಂಬರೀಶ್ ಅಭಿಮಾನಿಗಳು ಹಿತೈಷಿಗಳ ಹಾರೈಕೆ ಮತ್ತು ಆಶೀರ್ವಾದವಿರಲಿ ಎಂದು ಸುಮಲತಾ ಅಂಬರೀಶ್ ಅವರು ಬಿಜೆಪಿ ಸೇರ್ಪಡೆ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
Live : ಪಕ್ಷ ಸೇರ್ಪಡೆ ಕಾರ್ಯಕ್ರಮ
ಸ್ಥಳ : ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನ#JoinBJP https://t.co/8Slq6xsXE2
— BJP Karnataka (@BJP4Karnataka) April 5, 2024