Bengaluru 23°C
Ad

ಹೆಚ್‌.ಡಿ ಕುಮಾರಸ್ವಾಮಿಗೆ ಅಭಿನಂದನೆ ಸಲ್ಲಿಸಿದ ಸುಮಲತಾ ಅಂಬರೀಶ್

ಸುಮಲತಾ ಅಂಬರೀಶ್ಈ  ಬಾರಿ ಮಂಡ್ಯ ಲೋಕಸಭಾ ಕ್ಷೇತ್ರವನ್ನು ಕುಮಾರಸ್ವಾಮಿಗೆ ಬಿಟ್ಟು ಕೊಟ್ಟಿದ್ದು, ಇದೀಗ ಎಚ್​ಡಿಕೆ ಗೆಲುವು ಸಾಧಿಸಿದ್ದಾರೆ.

ಬೆಂಗಳೂರು: ಸುಮಲತಾ ಅಂಬರೀಶ್ಈ  ಬಾರಿ ಮಂಡ್ಯ ಲೋಕಸಭಾ ಕ್ಷೇತ್ರವನ್ನು ಹೆಚ್‌.ಡಿ ಕುಮಾರಸ್ವಾಮಿಗೆ ಬಿಟ್ಟು ಕೊಟ್ಟಿದ್ದು, ಇದೀಗ ಎಚ್​ಡಿಕೆ ಗೆಲುವು ಸಾಧಿಸಿದ್ದಾರೆ.

ಈ ಹಿನ್ನೆಲೆಯಲ್ಲಿಕುಮಾರಸ್ವಾಮಿಗೆ ನಿರ್ಗಮಿತ ಸಂಸದರಾದ ಸುಮಲತಾ ಅಂಬರೀಶ್‌ ಅವರು ಅಭಿನಂದನೆ ಸಲ್ಲಿಸಿದ್ದಾರೆ. ಅಲ್ಲದೇ ಕಾಂಗ್ರೆಸ್​ನ ಗ್ಯಾರಂಟಿಗಳಿಗೆ ಟಾಂಗ್ ಕೊಟ್ಟಿದ್ದಾರೆ.

ಈ ಕುರಿತು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿರುವ ಮಾಜಿ ಸಂಸದೆ ಸುಮಲತಾ ಅಂಬರೀಶ್, ನಮ್ಮ ಮಂಡ್ಯದ ಜನತೆಯ ಮತಗಳು ಯಾವುದೇ ಆಮಿಷಗಳಿಗೆ ಮಾರಾಟಕ್ಕಿಲ್ಲ ಎಂಬುದನ್ನು ನಮ್ಮ ಜನತೆ ತೋರಿಸಿದ್ದಾರೆ. ಹಲವು ಆಮಿಷಗಳು, ಪುಗಸಟ್ಟೆ ಭಾಗ್ಯಗಳ ಭರವಸೆ, ಮುಂತಾದ ಅಡ್ಡದಾರಿಗಳ ಮೂಲಕ ನಮ್ಮ ಮಂಡ್ಯದ ಜನತೆಗೆ ಮೋಸ ಮಾಡಲು ಸಾಧ್ಯವಿಲ್ಲ ಎಂದು ಸಾಬೀತು ಪಡಿಸಿದ ನಮ್ಮ ಮಂಡ್ಯದ ಜನತೆಗೆ ಅಭಿನಂದನೆಗಳು. ನರೇಂದ್ರ ಮೋದಿಯವರ ನಾಯಕತ್ವದಲ್ಲಿ ಕೆಲಸ ಮಾಡಲು, ನಮ್ಮ ಮಂಡ್ಯದ ನೂತನ ಸಂಸದರಾಗಿ ಆಯ್ಕೆಯಾದ ಹೆಚ್‌.ಡಿ ಕುಮಾರಸ್ವಾಮಿ ಅವರಿಗೆ ಹಾರ್ದಿಕ ಅಭಿನಂದನೆಗಳು ಎಂದು ಬರೆದುಕೊಂಡಿದ್ದಾರೆ.

ಈ ಲೋಕಸಭಾ ಚುನಾವಣೆ ಫಲಿತಾಂಶ ಮಂಗಳವಾರ ಹೊರಬಿದ್ದಿದ್ದು, ಬಿಜೆಪಿ-ಜೆಡಿಎಸ್‌ ಮೈತ್ರಿ ಅಭ್ಯರ್ಥಿ ಹೆಚ್‌.ಡಿ ಕುಮಾರಸ್ವಾಮಿ ಗೆಲುವು ಸಾಧಿಸಿದ್ದಾರೆ. 8,51,881 ಮತಗಳನ್ನು ಪಡೆಯುವ ಮೂಲಕ ಗೆಲುವು ಸಾಧಿಸಿದ್ದಾರೆ.

 

Ad
Ad
Nk Channel Final 21 09 2023
Ad