Bengaluru 28°C
Ad

ಅಸಹಜ ಲೈಂಗಿಕ ದೌರ್ಜನ್ಯ ಕೇಸ್‌ : ಸೂರಜ್ ರೇವಣ್ಣಗೆ ಜುಲೈ18ರವರೆಗೆ ನ್ಯಾಯಾಂಗ ಬಂಧನ

ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧನವಾಗಿರುವ ಸೂರಜ್ ರೇವಣ್ಣಗೆ ಜುಲೈ 18ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧನವಾಗಿರುವ ಸೂರಜ್ ರೇವಣ್ಣಗೆ ಜುಲೈ 18ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

Ad
300x250 2

ಇಂದು ಸಿಐಡಿ ಕಸ್ಟಡಿ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಪ್ರಕರಣ ವಿಚಾರಣೆ ನಡೆಸಿದ 42ನೇ ಎಸಿಎಂಎಂ ಕೋರ್ಟ್ ನ್ಯಾಯಾಧೀಶ ಕೆ.ಎನ್. ಶಿವಕುಮಾರ್ ಅವರು ಸೂರಜ್‌ಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲು ಸೂಚಿಸಿದ್ದಾರೆ. ಇದರಿಂದ ಸೂರಜ್ ಪರಪ್ಪನ ಅಗ್ರಹಾರ ಜೈಲು ಪಾಲಾಗಿದ್ದಾರೆ

ಇನ್ನು ಸೂರಜ್ ರೇವಣ್ಣ ಪರ ವಕೀಲ ನಿಖಿಲ್ ಡಿ ಕಾಮತ್ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದು, ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಸಿಐಡಿಗೆ ನ್ಯಾಯಾಧಿಶರು ಸೂಚಿಸಿದ್ದಾರೆ. ಹೀಗಾಗಿ ನಾಳೆಗೆ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆಯಾಗಿದೆ.

ನ್ಯಾಯಾಂಗ ಬಂಧನದಲ್ಲಿರುವ ಪ್ರಜ್ವಲ್‌ನ ಮಾಜಿ ಸಚಿವ ಎಚ್.ಡಿ. ರೇವಣ್ಣ ಬುಧವಾರ ಭೇಟಿ ಮಾಡಿದ್ದಾರೆ. ಪರಪ್ಪನ ಅಗ್ರಹಾರದಲ್ಲಿರುವ ಮಗನ ಬಗ್ಗೆ ಬೇಸರ ವ್ಯಕ್ತಪಡಿಸಿರುವ ರೇವಣ್ಣ, ಭವಿಷ್ಯವನ್ನು ಹಾಳು ಮಾಡಿಕೊಂಡೆ. ನಮ್ಮ ಕುಟುಂಬಕ್ಕೂ ಕೆಟ್ಟ ಹೆಸರು ತಂದೆ. ಎಂತಹ ಮಕ್ಕಳು ಹುಟ್ಟಿದ್ದೀರಪ್ಪಾ ನನಗೆ ಎಂದು ಬೇಸರ ಹೊರಹಾಕಿದ್ದಾರೆ ಎನ್ನಲಾಗಿದೆ.

 

Ad
Ad
Nk Channel Final 21 09 2023
Ad