Bengaluru 22°C
Ad

ಸೂರಜ್ ರೇವಣ್ಣ ವಿರುದ್ಧ ಲೈಂಗಿಕ‌ ದೌರ್ಜನ್ಯ ಆರೋಪ: ಪ್ರಕರಣದ ತನಿಖೆ ಸಿಐಡಿ ಗೆ

Cid

ಬೆಂಗಳೂರು: ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಅವರು ಯುವಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎನ್ನಲಾದ ಪ್ರಕರಣದ ವಿಚಾರಣೆಯನ್ನು ಸಿಐಡಿ ತನಿಖೆಗೆ ವಹಿಸಿ ಆದೇಶಿಸಿಲಾಗಿದೆ. ಸೂರಜ್ ರೇವಣ್ಣ ವಿರುದ್ಧ ಸಲಿಂಗ ಲೈಂಗಿಕ ದೌರ್ಜನ್ಯ ಪ್ರಕರಣ ವಿಚಾರವಾಗಿ ಗೃಹ ಸಚಿವರಾದ ಡಾ. ಜಿ.ಪರಮೇಶ್ವರ್​ ಪ್ರತಿಕ್ರಿಯೆ ನೀಡಿದ್ದು, ಸಿಐಡಿ ತನಿಖೆಗೆ ಕೊಡೋದಾಗಿ ತಿಳಿಸಿದ್ದಾರೆ.

ತನಿಖಾಧಿಕಾರಿಯಾಗಿರುವ ಸಕಲೇಶಪುರ ಡಿವೈಎಸ್ಪಿ ಪ್ರಮೋದ್ ಕು‌ಮಾರ್, ಸೂರಜ್ ಅವರನ್ನು ಬಂಧಿಸಿ, ಶನಿವಾರ ರಾತ್ರಿ 7.30 ರ ಹೊತ್ತಿಗೆ ಹಾಸನದ ಸಿಇಎನ್ ಪೊಲೀಸ್ ಠಾಣೆಗೆ ಕರೆತಂದಿದ್ದರು. ಸಂತ್ರಸ್ತ ನೀಡಿರುವ ದೂರು ಹಾಗೂ ಸೂರಜ್ ಆಪ್ತ ನೀಡಿರುವ ದೂರುಗಳ ಪ್ರತ್ಯೇಕ ವಿಚಾರಣೆ ನಡೆಸಿ ಹೇಳಿಕೆ ಪಡೆದುಕೊಂಡಿದ್ದಾರೆ.

ಸಂತ್ರಸ್ತನನ್ನು ವೈದ್ಯಕೀಯ ಪರೀಕ್ಷೆಗಾಗಿ ಬೆಂಗಳೂರಿನ ಬೌರಿಂಗ್ ಆಸ್ಪತ್ರೆಗೆ ಕರೆದೊಯ್ದಿದ್ದ ಪೊಲೀಸರು ವೈದ್ಯಕೀಯ ಪರೀಕ್ಷೆಯ ವರದಿಗಾಗಿ ಕಾಯುತ್ತಿದ್ದಾರೆ.

Ad
Ad
Nk Channel Final 21 09 2023
Ad