Ad

ಸ್ವಾಮೀಜಿಗಳ ಹೇಳಿಕೆ ತಪ್ಪು ಎಂದು ಹೇಳಲು ಸಾಧ್ಯವಿಲ್ಲ: ಜಿ. ಪರಮೇಶ್ವರ್

ಸ್ವಾಮೀಜಿಗಳ ಹೇಳಿಕೆ ತಪ್ಪು ಅಂತ ಹೇಳಕ್ಕಾಗಲ್ಲ, ಅವರಿಗೂ ಕಾಳಜಿ ಇರಬಹುದು. ಅವರು ಅವರ ಅಭಿಪ್ರಾಯ ಹೇಳಿದ್ದಾರೆ ಅಷ್ಟೇ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ.

ಬೆಂಗಳೂರು: ಸ್ವಾಮೀಜಿಗಳ ಹೇಳಿಕೆ ತಪ್ಪು ಅಂತ ಹೇಳಕ್ಕಾಗಲ್ಲ, ಅವರಿಗೂ ಕಾಳಜಿ ಇರಬಹುದು. ಅವರು ಅವರ ಅಭಿಪ್ರಾಯ ಹೇಳಿದ್ದಾರೆ ಅಷ್ಟೇ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ.

Ad
300x250 2

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ, ಡಿಸಿಎಂ ಹುದ್ದೆಗಳ ವಿಚಾರ ಪ್ರಸ್ತುತ ಅಪ್ರಸ್ತುತ ಅಂತ ಅಲ್ಲ. ಹೈಕಮಾಂಡ್ ನವರು ಆ ರೀತಿ ಬದಲಾವಣೆ ಮಾಡುವುದಾದರೆ ವೀಕ್ಷಕರನ್ನು ಕಳುಹಿಸಿ ಅಭಿಪ್ರಾಯ ಪಡೆಯುತ್ತಾರೆ ಎಂದು ಹೇಳಿದರು.

ನಾವು ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆಯವರನ್ನೂ ಭೇಟಿ ಮಾಡಿದ್ದೆವು. ರಾಜಕೀಯವಾಗಿ ಚರ್ಚೆ ಮಾಡಲಾಯಿತು. ಸೌಹಾರ್ದಯುತವಾಗಿ ಚರ್ಚೆ ಮಾಡಲಾಯ್ತು. ಹೆಚ್ಚುವರಿ ಡಿಸಿಎಂ ಬಗ್ಗೆ ಯಾರೂ ಪ್ರಸ್ತಾಪ ಮಾಡಲಿಲ್ಲ. ಹೆಚ್ಚುವರಿ ಡಿಸಿಎಂ ಬಗ್ಗೆ ಅವರವರು ಅವರವರ ಅಭಿಪ್ರಾಯ ಹೇಳುತ್ತಾರೆ. ಆದರೆ ಎಲ್ಲವೂ ಹೈಕಮಾಂಡ್ ಗೆ ಬಿಟ್ಟಿದ್ದು ಎಂದು ತಿಳಿಸಿದರು.

ಇತ್ತೀಚೆಗೆ ಬೆಂಗಳೂರಿನ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ನಾಡಪ್ರಭು ಕೆಂಪೇಗೌಡರ 515ನೇ ಜಯಂತೋತ್ಸವ ಸಮಾರಂಭದಲ್ಲಿ ಮಾತನಾಡಿದ್ದ ವಿಶ್ವ ಒಕ್ಕಲಿಗ ಮಹಾ ಸಂಸ್ಥಾನ ಮಠದ ಚಂದ್ರಶೇಖರನಾಥ ಸ್ವಾಮೀಜಿ , ಸಿದ್ದರಾಮಯ್ಯನವರು ಮುಂದೆ ಡಿ.ಕೆ ಶಿವಕುಮಾರ್ ಅವರಿಗೆ ಸಿಎಂ ಸ್ಥಾನ ಬಿಟ್ಟುಕೊಡಬೇಕು ಎಂದು ಹೇಳಿದ್ದರು.

ಸಿದ್ದರಾಮಯ್ಯನವರು ಮನಸ್ಸು ಮಾಡಿದರೆ ಮಾತ್ರ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗಲು ಸಾಧ್ಯ. ಈಗಾಗಲೇ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಆಗಿ ಅನುಭವ ಹೊಂದಿದ್ದಾರೆ. ನಮ್ಮ ಸಮುದಾಯದ ಡಿ.ಕೆ ಶಿವಕುಮಾರ್ ಅವರಿಗೆ ಮುಂದೆ ಅವಕಾಶ ಮಾಡಿಕೊಡಲಿ ಎಂದು ತಿಳಿಸಿದ್ದರು.

Ad
Ad
Nk Channel Final 21 09 2023
Ad