ಬೆಂಗಳೂರು: ಬೆಳಗ್ಗಿನಿಂದ ಸಂಜೆವರೆಗೂ ಸ್ವಿಗ್ಗಿ ಡೆಲಿವರಿ ಬಾಯ್ ಆಗಿ ಕೆಲಸ ಮಾಡಿ, ರಾತ್ರಿ ವೇಳೆ ಮನೆ ಮುಂದೆ ನಿಲ್ಲಿಸಿದ ಬೈಕ್ ಕದಿಯುತ್ತಿದ ಕಳ್ಳನನ್ನು ಇದೀಗ ಬೈಯ್ಯಪ್ಪನಹಳ್ಳಿ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.
ದೀಪಕ್ ಅಲಿಯಾಸ್ ದೀಪು ಬಂಧಿತ ಆರೋಪಿಯಾಗಿದ್ದಾನೆ. ಈತನ ಮೇಲೆ ವಿವಿಧ ಪೊಲೀಸ್ ಠಾಣೆಯಲ್ಲಿ ಸುಮಾರು 14 ಪ್ರಕರಣ ದಾಖಲಾಗಿದೆ.
ಈತ ಬೈಕ್ ಮಾರಾಟಕ್ಕೂ ಮೊದಲು ದಾಖಲಾತಿಯನ್ನೆಲ್ಲ ನಂತರ ಕೊಡುತ್ತೇನೆ ಎಂದು ಯಮಾರಿಸಿ, ಕದ್ದ ಬೈಕ್ಗಳನ್ನು ಕಡಿಮೆ ಬೆಲೆಗೆ ಮಾರಾಟ ಮಾಡುತ್ತಿದ್ದನು.
ಬೈಯ್ಯಪ್ಪನಹಳ್ಳಿ ಪೊಲೀಸರು ಈತನಿಂದ ಮೂರು ಲಕ್ಷ ಮೌಲ್ಯದ ಐದು ಬೈಕ್ಗಳನ್ನು ವಶಕ್ಕೆ ಪಡೆದಿದ್ದಾರೆ. ಬೈಯ್ಯಪ್ಪನಹಳ್ಳಿ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.