News Karnataka Kannada
Sunday, May 19 2024
ಬೆಂಗಳೂರು

ಕಾವೇರಿ ನೀರಿಗೆ ತಮಿಳುನಾಡು ಕ್ಯಾತೆ: ಕರ್ನಾಟಕದಿಂದಲೂ ಅಫಿಡವಿಟ್‌

Tamil Nadu is famous for Cauvery water: Karnataka
Photo Credit : Facebook

ಬೆಂಗಳೂರು: ಕಾವೇರಿ ನೀರಿಗೆ ಸಂಬಂಧಿಸಿ ಸುಪ್ರೀಂಕೋರ್ಟ್‌ ಗೆ ತಮಿಳುನಾಡು ಸಲ್ಲಿಸಿರುವ ಅರ್ಜಿ ವಿಚಾರಣೆ ನಾಳೆ (ಆ.25)ರಂದು ನಡೆಯಲಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕವು ಸಹ ಅಫಿಡವಿಟ್ ಸಲ್ಲಿಸಿದೆ. ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶದಂತೆ ಈಗಾಗಲೇ ಕರ್ನಾಟಕ ಸರ್ಕಾರ, ತಮಿಳುನಾಡಿಗೆ ನೀರು ಬಿಟ್ಟಿದೆ.

ಈ ಬಾರಿ ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಕೊರತೆ ನಡೆವೆಯೂ ಸಹ ನೀರು ಹರಿಸಿ ಪ್ರಾಧಿಕಾರದ ಆದೇಶ ಪಾಲನೆ ಮಾಡಲಾಗಿದೆ. ಆದರೂ ತಮಿಳುನಾಡು ಇನ್ನಷ್ಟು ಪ್ರಮಾಣದ ನೀರು ಬೇಕು ಎಂದು ಹೇಳುವ ಮೂಲಕ ಕಾವೇರಿ ನೀರನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಕರ್ನಾಟಕ ಅಫಿಡೆವಿಟ್​ನಲ್ಲಿ ಆರೋಪಿಸಿದೆ.

ಈ ಬಾರಿ ಕಾವೇರಿ ಕೊಳ್ಳದಲ್ಲಿ ಶೇ.42ರಷ್ಟು ಮಳೆ ಕೊರತೆಯಿದೆ. ಕರ್ನಾಟಕ ಸಿಡಬ್ಲ್ಯುಎಂಎ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆಸಿದೆ. ಸಾಮಾನ್ಯ ವರ್ಷದಂತೆ ನೀರು ಹರಿಸಲು ತಮಿಳುನಾಡು ಕೇಳುತ್ತಿದೆ. ತಮಿಳುನಾಡು 36.76 ಟಿಎಂಸಿ‌ ನೀರು ಹರಿಸುವಂತೆ ಕೇಳುತ್ತಿದೆ. ಆದರೆ ಈ ಬಾರಿ ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಕಡಿಮೆಯಾಗಿದ್ದು, ಕರ್ನಾಟಕದ ಜಲಾಶಯಗಳಲ್ಲಿ ಶೇ. 42 ಕಡಿಮೆ ನೀರು ಸಂಗ್ರಹವಾಗಿದೆ.

ಕಾವೇರಿ ಜಲಾನಯನದಲ್ಲಿರುವ ನೀರು ಕರ್ನಾಟಕಕ್ಕೆ ಸಾಕಾಗುವುದಿಲ್ಲ. ಬೆಳೆ ಮತ್ತು ಕುಡಿಯುವ ನೀರಿಗೆ ಕೊರತೆಯಾಗಲಿದೆ. ಬೆಂಗಳೂರಿನಂತಹ ಮಹಾ ನಗರಕ್ಕೂ ನೀರಿನ ಕೊರತೆಯಾಗಲಿದೆ. ಅದಾಗ್ಯೂ ಕರ್ನಾಟಕ ತಮಿಳುನಾಡಿಗೆ ನೀರು ಹರಿಸಿ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಪಾಲಿಸಿದೆ ಎಂದು ತಿಳಿಸಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು