ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಯುವ ಮೋರ್ಚ ಅಧ್ಯಕ್ಷ, ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ತೇಜಸ್ವಿ ಸೂರ್ಯ ನಾಮಪತ್ರ ಸಲ್ಲಿಸಿದ್ದಾರೆ. ಸೂರ್ಯ ತಮ್ಮ ಬಳಿ ಯಾವುದೇ ಸ್ವಂತ ಮನೆ, ಕಾರು ಅಥವಾ ಬೈಕ್ ಇಲ್ಲ ಎನ್ನುವದನ್ನು ಅಫಿಡವಿಟ್ ನಲ್ಲಿ ತಿಳಿಸಿದ್ದಾರೆ.
2019 ರಲ್ಲಿ 13.46 ರೂ. ಲಕ್ಷ ರೂಪಾಯಿ ಮೌಲ್ಯದ ಆಸ್ತಿ ಹೊಂದಿದ್ದ ತೇಜಸ್ವಿ ಸೂರ್ಯ ಈ ಬಾರಿ 4.10 ಕೋಟಿ ರೂ. ಮೌಲ್ಯದ ಆಸ್ತಿಯ ಒಡೆಯರಾಗಿದ್ದಾರೆ. ಈ ಮೂಲಕ ಐದೇ ವರ್ಷದಲ್ಲಿ ಸೂರ್ಯ ಆಸ್ತಿಯಲ್ಲಿ ಬರೋಬ್ಬರಿ 30 ಪಟ್ಟು ಹೆಚ್ಚಳವಾಗಿದೆ.
2019ರ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ಪ್ರಪ್ರಥಮ ಬಾರಿಗೆ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ತೇಜಸ್ವಿ ಸೂರ್ಯ, ತಮ್ಮ ಪ್ರಮಾಣ ಪತ್ರದಲ್ಲಿ 13.46 ಲಕ್ಷ ರೂ. ಮೌಲ್ಯದ ಆಸ್ತಿಯನ್ನು ಘೋಷಿಸಿಕೊಂಡಿದ್ದರು. ಐದು ವರ್ಷಗಳ ನಂತರ ಸಂಸದರೂ, ಭಾರತೀಯ ಜನತಾ ಯುವ ಮೋರ್ಚಾದ ಅಧ್ಯಕ್ಷರೂ ಆಗಿರುವ ತೇಜಸ್ವಿ ಸೂರ್ಯರ ಆಸ್ತಿ ಮೌಲ್ಯವು ರೂ. 4.10 ಕೋಟಿಗೆ ಏರಿಕೆಯಾಗಿದೆ. ಇನ್ನು ಹೂಡಿಕೆಯಿಂದಲೇ ಕೋಟ್ಯಾಂತರ ರೂ. ಗಳಿಕೆ ಆಗಿರುವುದಾಗಿ ತೇಜಸ್ವಿ ಸೂರ್ಯ ಲೆಕ್ಕ ಕೊಟ್ಟಿದ್ದಾರೆ.
ಮೇ.15 ರಿಂದ ಆರಂಭವಾಗಿದ್ದ ಎಸ್ಎಸ್ಎಲ್ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು ರಾಜ್ಯ…
ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್ನಲ್ಲಿ ಮನೆಗೆ ಹೋಗುವಾಗ ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…
ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…
ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…
ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…
ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…