Bengaluru 22°C
Ad

ರೇವ್ ಪಾರ್ಟಿ ಕೇಸ್: ಜೈಲಿನಿಂದ ತೆಲುಗು ನಟಿ ಹೇಮಾ ರಿಲೀಸ್

Actress Hema

ಬೆಂಗಳೂರು: ಬೆಂಗಳೂರು ರೇವ್ ಪಾರ್ಟಿಯಲ್ಲಿ‌ ಭಾಗಿಯಾಗಿ ಜೈಲು ಪಾಲಾಗಿದ್ದ ನಟಿ ಹೇಮಾ ಇದೀಗ ರಿಲೀಸ್ ಆಗಿದ್ದಾರೆ. ಬೆಂಗಳೂರು ಗ್ರಾಮಾಂತರ ಎನ್‌ಡಿಪಿಎಸ್ ವಿಶೇಷ ಕೋರ್ಟ್‌ನಿಂದ ಷರತ್ತುಬದ್ಧ ಜಾಮೀನು ಪಡೆದಿರುವ ಹೇಮಾ ಇಂದು ಜೈಲಿನಿಂದ ಬಿಡುಗಡೆಯಾಗಿದ್ದಾರೆ.

ರೇವ್ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಹೇಮಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಎನ್‌ಡಿಪಿಎಸ್ ವಿಶೇಷ ಕೋರ್ಟ್ ಜೂನ್ 12ರಂದು ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು. ಆದರೆ ಜಾಮೀನು ಪ್ರಕ್ರಿಯೆ ವಿಳಂಬ ಆದ ಹಿನ್ನೆಲೆ ಇಂದು ಹೇಮಾರನ್ನು ಬಿಡುಗಡೆ ಮಾಡಲಾಯಿತು.

Ad
Ad
Nk Channel Final 21 09 2023
Ad