ಮಂಗಳೂರು: ವಿಶ್ವ ಹಿಂದೂ ಪರಿಷತ್ತ್ , ಬಜರಂಗದಳ ಹಾಗೂ ದುರ್ಗಾವಹಿನಿ ವತಿಯಿಂದ ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ಬೈಸರನಲ್ಲಿ ಭಯೋತ್ಪಾದಕರ ಅಮಾಯಕ ಪ್ರವಾಸಿಗರ ಮೇಲೆ ನಡೆಸಿದ ದಾಳಿಯನ್ನು ಖಂಡಿಸಿ ಪ್ರತಿಭಟನೆ ನಡೆಸಲಾಯಿತು.
ಮಂಗಳೂರು ನಗರದ ಕದ್ರಿ ಮಲ್ಲಿಕಟ್ಟೆ ವೃತ್ತದ ಬಳಿ ಪ್ರತಿಭಟನೆ ನಡೆಸಿದ್ದು, ಪ್ರತಿಭಟನೆಯಲ್ಲಿ ಸಂಘಟನೆಯ ಪ್ರಮುಖರು, ಸದಸ್ಯರು ಭಾಗಿಯಾಗಿದ್ದರು.

