ಬೆಂಗಳೂರು: ಸೈಕಲ್ ಸವಾರನಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಸೈಕಲ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಾಲುಕ್ಯ ಸರ್ಕಲ್ನಲ್ಲಿ ನಡೆದಿದೆ. ಮೃತ ಸೈಕಲ್ ಸವಾರ ರಾಜಸ್ಥಾನ ಮೂಲದ ವ್ಯಕ್ತಿ ಎಂದು ತಿಳಿದು ಬಂದಿದೆ.
ಸೈಕಲ್ ಸವಾರ ಕೆಲಸ ಮುಗಿಸಿಕೊಂಡು ಮನೆಗೆ ಹೋಗುತ್ತಿದ್ದ ವೇಳೆ ಘಟನೆ ನಡೆದಿದೆ. ಸ್ಥಳಕ್ಕೆ ಹೈಗ್ರೌಂಡ್ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ಹೈಗ್ರೌಂಡ್ ಸಂಚಾರಿ ಪೊಲೀಸರು ಲಾರಿ ಚಾಲಕ ಹಾಗೂ ಲಾರಿಯನ್ನು ವಶಕ್ಕೆ ಪಡೆದಿದ್ದಾರೆ ಎಂಬ ಮಾಹಿತಿ ಮೂಲಗಳಿಂದ ತಿಳಿದು ಬಂದಿದೆ.

