ಬೆಂಗಳೂರು : ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲ ದೂರು ದಾಖಲಾಗಿದೆ. ನೊಂದ ಸಂತ್ರಸ್ತೆ ಕೊನೆಗೂ ಮಹಿಳಾ ಆಯೋಗಕ್ಕೆ ದೂರು ನೀಡಿದ್ದಾರೆ.
ನಿನ್ನೆ ಓರ್ವ ಸಂತ್ರಸ್ತೆ ಪೋನ್ ಕಾಲ್ ಮೂಲಕ ದೂರು ನೀಡಿದ್ದರೆ, ಇಂದು ಮಹಿಳಾ ಆಯೋಗಕ್ಕೆ ವಾಟ್ಸಾಪ್ ಮೂಲಕ ದೂರು ನೀಡಿದ್ದಾರೆ. ಇನ್ನು ಮತ್ತೊಂದೆಡೆ ಇದೇ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ಗೆ ಸಂಬಂಧಿಸಿದಂತೆ ಜೆಡಿಎಸ್ ಚುನಾವಣಾ ಏಜೆಂಟ್ ಹಾಸನದ ಸೈಬರ್ ಕ್ರೈಂ ಠಾಣೆಗೆ ದೂರು ನೀಡಿದ್ದಾರೆ.