Bengaluru 22°C
Ad

20 ಲಕ್ಷಕ್ಕೂ ಹೆಚ್ಚು ಬಿಪಿಎಲ್ ಕಾರ್ಡ್‌ ರದ್ದತಿಗೆ ಚಿಂತನೆ ನಡೆಸಿದ ಸರ್ಕಾರ

ರಾಜ್ಯದಲ್ಲಿ ಅಂತ್ಯೋದಯ ಮತ್ತು ಬಿಪಿಎಲ್ ಕಾರ್ಡ್ ಹೊಂದಿರುವ ಅನರ್ಹ ಫಲಾನುಭವಿಗಳನ್ನು ಗುರುತಿಸಿ ಸುಮಾರು 20 ಲಕ್ಷಕ್ಕೂ ಹೆಚ್ಚು ಕಾರ್ಡ್‌ಗಳನ್ನು ರದ್ದುಪಡಿಸಲು ಆಹಾರ ಇಲಾಖೆ ಚಿಂತನೆ ನಡೆಸಿದೆ.

ಬೆಂಗಳೂರು: ರಾಜ್ಯದಲ್ಲಿ ಅಂತ್ಯೋದಯ ಮತ್ತು ಬಿಪಿಎಲ್ ಕಾರ್ಡ್ ಹೊಂದಿರುವ ಅನರ್ಹ ಫಲಾನುಭವಿಗಳನ್ನು ಗುರುತಿಸಿ ಸುಮಾರು 20 ಲಕ್ಷಕ್ಕೂ ಹೆಚ್ಚು ಕಾರ್ಡ್‌ಗಳನ್ನು ರದ್ದುಪಡಿಸಲು ಆಹಾರ ಇಲಾಖೆ ಚಿಂತನೆ ನಡೆಸಿದೆ.

ಈ ಕುರಿತು ಸರ್ವೆ ನಡೆಸಲು ಖಾಸಗಿ ಕಂಪನಿಯೊಂದಕ್ಕೆ ಇಲಾಖೆ ಜವಾಬ್ದಾರಿ ವಹಿಸಿದೆ ಎನ್ನಲಾಗಿದೆ. ಪ್ರಸ್ತುತ ರಾಜ್ಯದಲ್ಲಿ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ ನಿಯಮಕ್ಕಿಂತ 14 ಲಕ್ಷ ಹೆಚ್ಚುವರಿ ಕಾರ್ಡ್‌ಗಳು ಇವೆ. ಇವುಗಳನ್ನು ಮಾತ್ರ ರದ್ದು ಪಡಿಸಬೇಕೆಂಬ ಚರ್ಚೆ ಹಿಂದಿನಿಂದಲೂ ನಡೆಯುತ್ತಿತ್ತು.

ಈಗ 20 ಲಕ್ಷಕ್ಕೂ ಹೆಚ್ಚು ಬಿಪಿಎಲ್ ಕಾಡ್ ೯ಗಳನ್ನು ಪತ್ತೆ ಮಾಡಿ ರದುಪಡಿಸಬೇಕು. ಈ ಮೂಲಕ ಅನ್ನಭಾಗ್ಯ ಯೋಜನೆಯಡಿ ಅನಗತ್ಯವಾಗಿ ಖರ್ಚಾಗುತ್ತಿರುವ ಹಣವನ್ನು ಉಳಿಸಬೇಕೆಂದು ಚಿಂತನೆ ನಡೆಸಿರುವ ಆಹಾರ ಸಚಿವ ಕೆ.ಎಚ್.ಮುನಿಯಪ ಅವರು, ಅನರ್ಹ ಬಿಪಿಎಲ್ ಕಾರ್ಡ್ ಪತ್ತೆಗೆ ಮುಂದಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಅರ್ಹರಿಗಿಂತ ಇತರರೇ ಹೆಚ್ಚಾಗಿ ಅಕ್ಕಿ ಪಡೆಯುತ್ತಿರುವುದು ಗಮನಕ್ಕೆ ಬಂದಿದೆ. ಈ ಹಿನ್ನೆಲೆಯಲ್ಲಿ ಅರ್ಹರಿಗೆ ಮಾತ್ರ ಫಲ ಸಿಗಬೇಕೆಂಬ ಉದ್ದೇಶದಿಂದ ಅರ್ಹರ ಹುಡುಕಾಟಕ್ಕೆಂದು ಆಹಾರ ಇಲಾಖೆ ಖಾಸಗಿ ಸಂಸ್ಥೆಯೊಂದಕ್ಕೆ ಜವಾಬ್ದಾರಿ ವಹಿಸಿದೆ. ಈ ಸಂಸ್ಥೆ ಶೀಘ್ರದಲ್ಲೇ ರಾಜ್ಯ ಸರ್ಕಾರ ಈ ಹಿಂದೆ ಹೊರಡಿಸಿರುವ ಮಾನದಂಡ ಅನುಸರಿಸಿ ಅಂತ್ಯೋದಯ ಪಡೆದಿರುವವರು ಅರ್ಹರೋ, ಅನರ್ಹರೋ ಎಂಬುದನ್ನು ಪತ್ತೆ ಮಾಡಿ ವರದಿ ನೀಡಲಿದೆ. ಈ ವರದಿಯ ಆಧಾರದಲ್ಲಿ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಮೂಲಗಳು ಹೇಳಿವೆ.

 

 

Ad
Ad
Nk Channel Final 21 09 2023