ಬೆಂಗಳೂರು : ವಿಧಾನಮಂಡಲ ಅಧಿವೇಶನ ಇತಿಹಾಸದಲ್ಲೇ ಮೊದಲ ಬಾರಿಗೆ ಅಪರೂಪದ ಕ್ಷಣಕ್ಕೆ ಸಾಕ್ಷಿಯಾಗಿದೆ. ರಾಜ್ಯಪಾಲ ಥಾವರ್ ಚಂದ್ ಗೆಹಲೋಟ್ ಕೇವಲ 2 ಸಾಲಿನಲ್ಲಿ ಭಾಷಣ ಮುಗಿಸಿದ್ದಾರೆ.
ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಪ್ರಗತಿ ಸಾಧಿಸುವತ್ತ ಸರ್ಕಾರ ಸರ್ವರೀತಿಯಲ್ಲಿ ಕಟಿ ಬದ್ಧವಾಗಿದೆ ಎಂದಷ್ಟೇ ಹೇಳಿ ಸದನದಿಂದ ಹೊರನಡೆದಿದ್ದಾರೆ.
ರಾಜ್ಯಪಾಲರ ನಡೆಗೆ ಸಚಿವರು ಹಾಗೂ ಶಾಸಕರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಅವರ ವಿರುದ್ಧ ಧಿಕ್ಕಾರ ಕೂಗಿ ಕಾಂಗ್ರೆಸ್ನ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಭಾಷಣದಲ್ಲಿ 11 ಪ್ಯಾರಾ ಗಳನ್ನು ತೆಗೆಯುವಂತೆ ರಾಜ್ಯಪಾಲರು ಸೂಚಿಸಿದ್ದರು. ಇದೆ ವಿಚಾರವಾಗಿ ರಾಜಭವನ ಹಾಗೂ ಸರ್ಕಾರದ ನಡುವೆ ತೀವ್ರ ಬಿಕ್ಕಟ್ಟು ಸೃಷ್ಟಿ ಮಾಡಿತ್ತು.

