Bengaluru 25°C

ಅಕ್ರಮ ಬಯಲಿಗೆ ಬಂದು ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು: ಆರ್‌.ಅಶೋಕ್‌

ಮುಡಾ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧದ ತನಿಖೆಗೆ ರಾಜ್ಯಪಾಲರು ಅನುಮತಿ ನೀಡಿರುವುದು ಬಿಜೆಪಿ ಪಾದಯಾತ್ರೆಗೆ ಸಿಕ್ಕಿರುವ ಯಶಸ್ಸು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಹೇಳಿದರು.

ಬೆಂಗಳೂರು: ಮುಡಾ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧದ ತನಿಖೆಗೆ ರಾಜ್ಯಪಾಲರು ಅನುಮತಿ ನೀಡಿರುವುದು ಬಿಜೆಪಿ ಪಾದಯಾತ್ರೆಗೆ ಸಿಕ್ಕಿರುವ ಯಶಸ್ಸು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಹೇಳಿದರು.


ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯಾವುದೇ ವ್ಯಕ್ತಿಯ ವಿರುದ್ಧ ಬಿಜೆಪಿ ಹೋರಾಟ ಮಾಡುತ್ತಿಲ್ಲ. ಅಕ್ರಮ ಬಯಲಿಗೆ ಬಂದು ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕೆಂಬುದು ನಮ್ಮ ಉದ್ದೇಶ. 86 ಸಾವಿರ ಜನರು ನಿವೇಶನಕ್ಕೆ ಅರ್ಜಿ ಸಲ್ಲಿಸಿ ಕಾಯುತ್ತಿದ್ದಾರೆ. ಅವರಿಗೆ ಈ ತನಿಖೆಯಿಂದ ನ್ಯಾಯ ದೊರೆಯಲಿದೆ ಎಂದರು.


ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮುಡಾ ಹಗರಣದ ಬಗ್ಗೆ ಸ್ಪಷ್ಟನೆ ನೀಡಲು ಸಾಧ್ಯವಾಗಿಲ್ಲ. ಸದನದಲ್ಲಿ ನಿಲುವಳಿ ಸೂಚನೆಗೆ ಅವಕಾಶ ಕೊಟ್ಟು ಜನರಲ್ಲಿರುವ ಗೊಂದಲ ನಿವಾರಣೆ ಮಾಡಬೇಕಿತ್ತು. ಅದನ್ನು ಬಿಟ್ಟು ಪಲಾಯನ ಮಾಡಿದ್ದರಿಂದ ಇದರಲ್ಲಿ ಏನೋ ಇದೆ ಎಂಬ ಅನುಮಾನ ಎಲ್ಲರಿಗೂ ಸ್ಪಷ್ಟವಾಯಿತು. ಪ್ರತಿ ಹಂತದಲ್ಲೂ ಸಿದ್ದರಾಮಯ್ಯನವರ ಹಸ್ತಕ್ಷೇಪ ಕಂಡುಬಂದಿದೆ.


ಕಾಂಗ್ರೆಸ್‌ ಅಭಿವೃದ್ಧಿ ಮಾಡದೆ ಹೈಕಮಾಂಡ್‌ಗೆ ಎಟಿಎಂ ಆಗಿ ಕೆಲಸ ಮಾಡುತ್ತಿದೆ. ತುಂಗಭದ್ರಾ ಜಲಾಶಯದ ಗೇಟ್‌ ದುರಸ್ತಿ ಮಾಡಲು ಕೂಡ ಸರ್ಕಾರದ ಬಳಿ ಹಣವಿಲ್ಲ ಎಂದು ದೂರಿದರು.‌ ಕಾಂಗ್ರೆಸ್‌ ಸರ್ಕಾರವನ್ನು ಅಸ್ಥಿರಗೊಳಿಸುವ ಕೆಲಸವನ್ನು ಬಿಜೆಪಿ ಮಾಡುತ್ತಿಲ್ಲ. ಕಾಂಗ್ರೆಸ್‌ ಪಕ್ಷದ ಶಾಸಕರೇ ತಿರುಗಿಬಿದ್ದರೆ ಅದಕ್ಕೆ ನಾವು ಜವಾಬ್ದಾರರಲ್ಲ ಎಂದು ಅವರು ಇದೇ ವೇಳೆ ಸ್ಪಷ್ಟಪಡಿಸಿದರು.


Nk Channel Final 21 09 2023