Bengaluru 22°C
Ad

15 ದಿನಗಳಲ್ಲಿ ಗುಂಡಿ ಮುಚ್ಚಬೇಕು, ದೂರು ಬಂದರೆ ಅಧಿಕಾರಿಗಳೇ ನೇರ ಹೊಣೆ: ಡಿಕೆಶಿ

ಹದಿನೈದು ದಿನಗಳಲ್ಲಿ ಎಲ್ಲಾ ಗುಂಡಿಗಳನ್ನು ಮುಚ್ಚಲೇಬೇಕು. ಮುಚ್ಚಿಲ್ಲ ಅಂದರೆ ಕ್ರಮ ತೆಗೆದುಕೊಳ್ಳುತ್ತೇನೆ. ಸಾರ್ವಜನಿಕರಿಂದ ಯಾವುದೇ ದೂರು ಬರಬಾರದು. ಬಂದರೆ ಅಧಿಕಾರಿಗಳೇ ನೇರ ಹೊಣೆ ಎಂದು ಬಿಬಿಎಂಪಿ ಅಧಿಕಾರಿಗಳಿಗೆ ಡಿಸಿಎಂ ಡಿಕೆ ಶಿವಕುಮಾರ್ ವಾರ್ನಿಂಗ್ ಮಾಡಿದ್ದಾರೆ.

ಬೆಂಗಳೂರು: ಹದಿನೈದು ದಿನಗಳಲ್ಲಿ ಎಲ್ಲಾ ಗುಂಡಿಗಳನ್ನು ಮುಚ್ಚಲೇಬೇಕು. ಮುಚ್ಚಿಲ್ಲ ಅಂದರೆ ಕ್ರಮ ತೆಗೆದುಕೊಳ್ಳುತ್ತೇನೆ. ಸಾರ್ವಜನಿಕರಿಂದ ಯಾವುದೇ ದೂರು ಬರಬಾರದು. ಬಂದರೆ ಅಧಿಕಾರಿಗಳೇ ನೇರ ಹೊಣೆ ಎಂದು ಬಿಬಿಎಂಪಿ ಅಧಿಕಾರಿಗಳಿಗೆ ಡಿಸಿಎಂ ಡಿಕೆ ಶಿವಕುಮಾರ್ ವಾರ್ನಿಂಗ್ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸೆಪ್ಟಂಬರ್ 15ರ ವರೆಗೆ ಗಡುವು ಕೊಟ್ಟಿದ್ದೇನೆ. ನಂತರ ನಾನೇ ಸಿಟಿ ರೌಂಡ್ ಹಾಕುತ್ತೇನೆ. ಬೇಗ ಗುಂಡಿ ಮುಚ್ಚಬೇಕು. ಏನಾದರೂ ಸಮಸ್ಯೆಯಾದರೆ ಎಷ್ಟು ಜನ ಅಧಿಕಾರಿಗಳು ಸಸ್ಪೆಂಡ್ ಆಗುತ್ತಾರೆ ಗೊತ್ತಿಲ್ಲ ಎಂದರು.  ನೀರು ನಿಲ್ಲುವ ಜಾಗಗಳ ಬಗ್ಗೆ ಗಮನ ಕೊಡಿ. ಅಕ್ಟೋಬರ್ 2ರಂದು ಗಾಂಧಿ ಜಯಂತಿ ಹಿನ್ನೆಲೆ ಎಲ್ಲಾ ಶಾಲೆಗಳಲ್ಲಿ ಸ್ವಚ್ಛತೆ ಕಾಪಾಡುತ್ತೇವೆ ಎಂದು ಪ್ರತಿಜ್ಞೆ ಮಾಡಬೇಕು ಎಂದು ಹೇಳಿದರು.

ಡಿಸಿಎಂ ಅಮೆರಿಕ ಪ್ರವಾಸಕ್ಕೆ ತೆರಳುವ ಮುನ್ನ ಬಿಬಿಎಂಪಿ ಅಧಿಕಾರಿಗಳೊಂದಿಗೆ ಮಲ್ಲೇಶ್ವರಂ ಬಿಬಿಎಂಪಿ ಐಪಿಪಿ ಕಚೇರಿಯಲ್ಲಿ ಸಭೆ ನಡೆಸಿದರು. ಬೆಂಗಳೂರಿನಲ್ಲಿ ಗುಂಡಿ ಮುಚ್ಚಲು ಗಡುವು ನೀಡಿದ ಹಿನ್ನೆಲೆಯಲ್ಲಿ, ಆಗಿರುವ ಪ್ರಗತಿ ಬಗ್ಗೆ ಮಾಹಿತಿ ಪಡೆದರು. ಹೆಚ್ಚಾಗಿರುವ ರಸ್ತೆ ಗುಂಡಿಗಳನ್ನು ಆದಷ್ಟು ಬೇಗ ಮುಚ್ಚಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

 

 

Ad
Ad
Nk Channel Final 21 09 2023