ಬೆಂಗಳೂರು: ಸಿಎಂ ಸ್ಥಾನಕ್ಕೆ ಕಾಂಗ್ರೆಸ್‌ ನಾಯಕರ ರೇಸ್‌ ಶುರುವಾಗಿದ್ದು, ಇದರ ಪಟ್ಟಿ ಹನುಮಂತನ ಬಾಲದಂತೆ ಬೆಳೆಯುತ್ತಲೇ ಹೋಗುತ್ತಿದೆ ಎಂದು ಬಿಜೆಪಿ ನಾಯಕ ಸಿಟಿ ರವಿ ಲೇವಡಿ ಮಾಡಿದ್ದಾರೆ.

ಸಿಎಂ ಸಿದ್ದರಾಮಯ್ಯ ತಮ್ಮ ಸ್ಥಾನದಿಂದ ಇಳಿದರೆ ಡಿಸಿಎಂ ಡಿಕೆ ಶಿವಕುಮಾರ್‌ ಅವರೇ ಮುಂದಿನ ಸಿಎಂ ಆಗುತ್ತಾರೆ ಎಂದು ಎಲ್ಲರೂ ಅಂದುಕೊಂಡಿದ್ದೆವು. ಆದರೆ ಈಗ ಸತೀಶ್‌ ಜಾರಕಿಹೊಳಿ, ಪ್ರಿಯಾಂಕ್‌ ಖರ್ಗೆ, ಪರಮೇಶ್ವರ್‌ ಹೀಗೆ ಇದರ ಪಟ್ಟಿ ಬೆಳೆಯುತ್ತಲೇ ಇದೆ.

ಆರ್‌ವಿ ದೇಶಪಾಂಡೆನೂ ಸಿಎಂ ಆಕಾಂಕ್ಷಿ ಅಂತಾರೆ ಎಂದು ಹೇಳಿದರು. ಇದೀಗ ಸಿಎಂ ಸ್ಥಾನಕ್ಕೆ ಆಕಾಂಕ್ಷಿಗಳ ಲಿಸ್ಟ್‌ ದೊಡ್ಡದಾಗುತ್ತಲೇ ಇದ್ದು, ಸಿಎಂ ಸಿದ್ದರಾಮಯ್ಯ ಅವರಿಗೇ ನಡುಕ ಉಂಟಾಗುತ್ತಿದೆ ಎಂದು ಸಿಟಿ ರವಿ ಕಾಲೆಳೆದರು.