News Karnataka Kannada
Friday, May 03 2024
ಬೆಂಗಳೂರು

ಡೋಂಗೀ ಪ್ರಜಾಪ್ರಭುತ್ವವಾದಿಯ ಅಸಲಿ ಮುಖ ಕಳಚಿಬಿದ್ದಿದೆ: ಎಚ್​ಡಿ ಕುಮಾರಸ್ವಾಮಿ

ಗೌರವಾನ್ವಿತ ರಾಷ್ಟ್ರಪತಿಗಳು, ದೇಶದ ಪ್ರಥಮ ಪ್ರಜೆ ಆಗಿರುವ ದ್ರೌಪದಿ ಮುರ್ಮು ಅವರನ್ನು ಏಕವಚನದಲ್ಲಿ ತುಚ್ಛವಾಗಿ ಸಂಬೋಧಿಸಿದ ಕೀಳು, ವಿಕೃತ, ಹೀನ ನಾಲಗೆಯ ಸಿದ್ದರಾಮಯ್ಯರನ್ನು ಮುಖ್ಯಮಂತ್ರಿ ಹುದ್ದೆಯಿಂದ ಕೂಡಲೇ ವಜಾ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್​ಡಿ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.
Photo Credit : News Kannada

ಬೆಂಗಳೂರು:  ಗೌರವಾನ್ವಿತ ರಾಷ್ಟ್ರಪತಿಗಳು, ದೇಶದ ಪ್ರಥಮ ಪ್ರಜೆ ಆಗಿರುವ ದ್ರೌಪದಿ ಮುರ್ಮು ಅವರನ್ನು ಏಕವಚನದಲ್ಲಿ ತುಚ್ಛವಾಗಿ ಸಂಬೋಧಿಸಿದ ಕೀಳು, ವಿಕೃತ, ಹೀನ ನಾಲಗೆಯ ಸಿದ್ದರಾಮಯ್ಯರನ್ನು ಮುಖ್ಯಮಂತ್ರಿ ಹುದ್ದೆಯಿಂದ ಕೂಡಲೇ ವಜಾ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್​ಡಿ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಚಿತ್ರದುರ್ಗದಲ್ಲಿ ನಡೆದ ಶೋಷಿತರ ಸಮಾವೇಶದಲ್ಲಿ ಭಾಷಣ ಮಾಡುವ ವೇಳೆ ಸಿದ್ದರಾಮಯ್ಯ ಅವರು ಇವರ(ಬಿಜೆಪಿ) ಯೋಗ್ಯತೆಗೆ ಪಾಪಾ ದ್ರೌಪದಿ ಮುರ್ಮು ಶೋಷಿತ ವರ್ಗಕ್ಕೆ ಸೇರಿದವಳು. ಅವಳನ್ನ ಪಾರ್ಲಿಮೆಂಟ್ ಉದ್ಘಾಟನೆಗೆ ಕರೆದಿಲ್ಲ ಎಂದು ಏಕವಚನದಲ್ಲಿ ಸಂಭೋಧಿಸಿದ್ದಾರೆ.

ಸರಣಿ ಟ್ವೀಟ್ ಮಾಡಿರುವ ಕುಮಾರಸ್ವಾಮಿ, ನಿನ್ನೆಯ ದಿನ ಚಾಮರಾಜನಗರದಲ್ಲಿ ಇದೇ ಸಿದ್ದರಾಮಯ್ಯನವರ ಸುಪುತ್ರ ಯತೀಂದ್ರ ಭಾಷಣ ಮಾಡುತ್ತಿದ್ದಾಗ ಯಾರೋ ಒಬ್ಬರು ಏಕವಚನದಲ್ಲಿ ಪ್ರಶ್ನಿಸಿದರೆಂಬ ಕಾರಣಕ್ಕೆ ಪೊಲೀಸರು ಆತನನ್ನು ಅಟ್ಟಾಡಿಸಿಕೊಂಡು ಹೋಗಿ ಬಂಧಿಸಿ ದರದರನೇ ಎಳೆದುಕೊಂಡು ಹೋದರು. ಹಾಗಿದ್ದರೆ, ರಾಷ್ಟ್ರಪತಿಗಳನ್ನೇ ಏಕವಚನದಲ್ಲಿ ಸಂಬೋಧಿಸಿದ ಈ ಮುಖ್ಯಮಂತ್ರಿಗೇನು ಶಿಕ್ಷೆ ಎಂದು ಪ್ರಶ್ನಿಸಿದ್ದಾರೆ.

ಆಚಾರವಿಲ್ಲದ ನಾಲಿಗೆ, ನಿನ್ನ ನೀಚಬುದ್ಧಿಯ ಬಿಡು ನಾಲಿಗೆ ಎಂದು ದಾಸರು ಹೇಳಿದ್ದಾರೆ. ಸಿದ್ದರಾಮಯ್ಯಗೆ ಆಚಾರ ಹತ್ತಿರಕ್ಕೂ ಸುಳಿಯದ ವಿಚಾರ. ಶೋಷಿತ ಬುಡಕಟ್ಟು ಸಮುದಾಯದಿಂದ ಬಂದ ದೇಶದ ಮೊತ್ತ ಮೊದಲ ರಾಷ್ಟ್ರಪತಿಗಳು, ಅದರಲ್ಲಿಯೂ ಮಹಿಳೆ.. ಶೋಷಿತರ ಜಾಗೃತಿ ಸಮಾವೇಶದಲ್ಲೇ ಅವರಿಗೆ ಮುಖ್ಯಮಂತ್ರಿ ಅಪಮಾನ ಎಸಗಿದ್ದಾರೆ.

ಈ ಡೋಂಗೀ ಪ್ರಜಾಪ್ರಭುತ್ವವಾದಿಯ ಅಸಲಿ ಮುಖ ಕಳಚಿಬಿದ್ದಿದೆ. ಒಂದು ಕ್ಷಣವೂ ಮುಖ್ಯಮಂತ್ರಿ ಪದವಿಯಲ್ಲಿ ಇರಲು ಅವರು ಅರ್ಹರಲ್ಲ. ಕೂಡಲೇ ತಾವೆಸಗಿರುವ ಅಪಚಾರಕ್ಕೆ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಅಥವಾ ಮಾನ್ಯ ರಾಜ್ಯಪಾಲರೇ ಅವರನ್ನು ಮುಖ್ಯಮಂತ್ರಿ ಕುರ್ಚಿಯಿಂದ ಕಿತ್ತೆಸೆಯಬೇಕು ಎಂದು ಹೇಳಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು