ಬೆಂಗಳೂರು: ರಾಜ್ಯದಲ್ಲಿ ಡೆಂಗ್ಯೂ ನಿಯಂತ್ರಣಕ್ಕೆ ಸರ್ಕಾರ ಕ್ರಮ ಕೈಗೊಂಡಿದ್ದು, ರಾಜ್ಯ ಸರ್ಕಾರ ಡೆಂಗ್ಯೂವನ್ನು ಸಂಕ್ರಾಮಿಕ ರೋಗ ಎಂದು ಘೋಷಣೆ ಮಾಡಿ, ಇನ್ನು ಮುಂದೆ ಸ್ವಚ್ಛತೆ ಕಾಪಾಡದವರಿಗೆ ದಂಡ ವಿಧಿಸುವುದಾಗಿ ಎಚ್ಚರಿಕೆ ನೀಡಿದೆ.
ಸಾಂಕ್ರಾಮಿಕ ರೋಗ ನಿಯಂತ್ರಣ ಕಾಯ್ದೆ 2020 ಅಡಿ ತಿದ್ದುಪಡಿ ಮಾಡಿ ಆಗಸ್ಟ್ 31ರ ಕರ್ನಾಟಕ ಗೆಜೆಟ್ನಲ್ಲಿ ಅಧಿಸೂಚನೆ ಹೊರಡಿಸಲಾಗಿದೆ. ನೌರ್ಮಲ್ಯ ಕಾಪಾಡದವರಿಗೆ ದಂಡ ವಿಧಿಸುವುದಾಗಿ ಎಚ್ಚರಿಕೆ ನೀಡಿರುವ ಸರ್ಕಾರ, ಖಾಲಿ ಜಾಗದಲ್ಲಿ ನೀರು ನಿಲ್ಲದಂತೆ ಕ್ರಮ ವಹಿಸಬೇಕು, ನಿವೇಶನದ ಮಾಲೀಕರು ನಿಗಾ ವಹಿಸಬೇಕು ಎಂದು ತಿಳಿಸಿದೆ.
ನೈರ್ಮಲ್ಯ ಕಾಪಾಡದೇ ಹೋದಲ್ಲಿ ಅಂತಹವರ ವಿರುದ್ಧ 24 ಗಂಟೆಯಲ್ಲಿ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಮನೆಗಳಿಗೆ ಹೊರಾಂಗಣ ಹಾಗೂ ಒಳಾಂಗಣದಲ್ಲಿ ನಿಯಮ ಉಲ್ಲಂಘಿಸಿದರೆ 400 ರೂ. ದಂಡ. ನಗರ ಪ್ರದೇಶ ಗ್ರಾಮಾಂತರದಲ್ಲಿ ಒಳಾಂಗಣ ಹಾಗೂ ಹೊರಾಂಗಣಕ್ಕೆ 200 ರೂ. ದಂಡ.
ರೆಸ್ಟೋರೆಂಟ್ , ಹೋಟೆಲ್, ಲಾಡ್ಜ್, ರೆಸಾರ್ಟ್, ಮಾರ್ಕೆಟ್, ಪಾರ್ಕ್, ಮಾಲ್, ಕಾರ್ಖಾನೆ, ಥಿಯೇಟರ್, ಶಾಲೆಗಳು ಸೇರಿದಂತೆ ಇತರೆಡೆ ರೂಲ್ಸ್ ಬ್ರೇಕ್ ಮಾಡಿದರೆ ನಗರ ಪ್ರದೇಶದಲ್ಲಿ 1 ಸಾವಿರ ರೂ ದಂಡ. ಗ್ರಾಮಾಂತರ ಭಾಗದಲ್ಲಿ 500 ರೂ. ದಂಡ. ತೆರೆದ ಸ್ಥಳಗಳಲ್ಲಿ ರೂಲ್ಸ್ ಬ್ರೇಕ್ ಮಾಡಿದರೆ ನಗರದ ಪ್ರದೇಶದಲ್ಲಿ 2 ಸಾವಿರ ರೂಪಾಯಿ ದಂಡ ವಿಧಿಸುವ ಸಾಧ್ಯತೆಯಿದೆ.

