News Karnataka Kannada
Wednesday, May 08 2024
ಬೆಂಗಳೂರು

ಪೊಲೀಸರ ದಿಕ್ಕು ತಪ್ಪಿಸಲು ಶರ್ಟ್, ಪ್ಯಾಂಟ್ ಬದಲಿಸಿ ಹೋದ ಶಂಕಿತ !

ರಾಮೇಶ್ವರಂ ಕೆಫೆ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರಿಗೆ ಯಾಮಾರಿಸಲು ಆರೋಪಿ ಮಾಸ್ಟರ್ ಪ್ಲಾನ್ ಮಾಡಿದ್ದಾನೆ. ಕೆಫೆಯಲ್ಲಿ ಬಾಂಬ್ ಇಟ್ಟ ಬಳಿಕ ಆರೋಪಿ ಶರ್ಟ್ ಮತ್ತು ಮತ್ತು ಪ್ಯಾಂಟ್ ಬದಲಿಸಿ ಹೋಗಿರುವ ವಿಚಾರ ಪೊಲೀಸ್ ತನಿಖೆಯಲ್ಲಿ ಬೆಳಕಿಗೆ ಬಂದಿದೆ
Photo Credit : News Kannada

ಬೆಂಗಳೂರು: ರಾಮೇಶ್ವರಂ ಕೆಫೆ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರಿಗೆ ಯಾಮಾರಿಸಲು ಆರೋಪಿ ಮಾಸ್ಟರ್ ಪ್ಲಾನ್ ಮಾಡಿದ್ದಾನೆ. ಕೆಫೆಯಲ್ಲಿ ಬಾಂಬ್ ಇಟ್ಟ ಬಳಿಕ ಆರೋಪಿ ಶರ್ಟ್ ಮತ್ತು ಮತ್ತು ಪ್ಯಾಂಟ್ ಬದಲಿಸಿ ಹೋಗಿರುವ ವಿಚಾರ ಪೊಲೀಸ್ ತನಿಖೆಯಲ್ಲಿ ಬೆಳಕಿಗೆ ಬಂದಿದೆ.

ದಾರಿ ಮಧ್ಯೆ ಆರೋಪಿ ಬಟ್ಟೆ ಬದಲಿಸಿ ಹೋಗಿರುವ ಬಗ್ಗೆ ತನಿಖಾಧಿಕಾರಿಗಳಿಗೆ ಮಾಹಿತಿ ದೊರೆತಿದ್ದು, ಶರ್ಟ್ ಮೇಲೆ ಶರ್ಟ್, ಪ್ಯಾಂಟ್ ಮೇಲೆ ಪ್ಯಾಂಟ್ ಹಾಕಿಕೊಂಡು ಮುಂದೆ ಹೋಗಿರುವ ಬಗ್ಗೆ ತನಿಖಾಧಿಕಾರಿಗಳಿಗೆ ಸಾಕ್ಷ್ಯ ಸಿಕ್ಕಿದೆ.

ಅಲ್ಲದೇ 3-4 ಬಸ್ ಬದಲಿಸಿ ಪ್ರಯಾಣ ಮಾಡಿರುವ ಬಗ್ಗೆ ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ. ರಾಜ್ಯದ ಗಡಿ ಬಿಟ್ಟು ಹೊರರಾಜ್ಯಕ್ಕೆ ಎಸ್ಕೇಪ್ ಆಗಿರುವ ಬಗ್ಗೆ ಶಂಕಿಸಿದ್ದು, ಸಿಸಿಬಿ, ಪೊಲೀಸ್ ಇಲಾಖೆಯ 200ಕ್ಕೂ ಹೆಚ್ಚು ಅಧಿಕಾರಿಗಳಿಂದ ತಲಾಶ್ ನಡೆಸಲಾಗುತ್ತಿದೆ. ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಸಂಭವಿಸಿ 48 ಗಂಟೆಗಳು ಕಳೆದರೂ ಈವರೆಗೂ ಆರೋಪಿಯ ಬಗ್ಗೆ ಸುಳಿವು ಸಿಕ್ಕಿಲ್ಲ. ಸಿಸಿಟಿವಿ, ಮೊಬೈಲ್ ಟವರ್ ಡಂಪ್ ಅನಾಲಿಸಿಸ್ ಮಾಡಿದರೂ ಯಾವುದೇ ಸುಳಿವು ದೊರೆತಿಲ್ಲ. ಸಿಸಿಟಿವಿಯಲ್ಲಿ ಆತ ಯಾರೊಂದಿಗೂ ಫೋನಿನಲ್ಲಿ ಮಾತನಾಡುತ್ತಿರುವ ದೃಶ್ಯ ಸೆರೆಯಾಗಿತ್ತು. ಆದರೆ ತನಿಖೆಗೆ ಇಳಿದಾಗ ಆತ ಡಮ್ಮಿ ಫೋನ್ ಅನ್ನು ಬಳಸಿದ್ದು, ಈ ಫೋನ್ ಬಳಸಿದ ವಿಚಾರ ತನಿಖೆ ವೇಳೆ ಬೆಳಕಿಗೆ ಬಂದಿದೆ

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು