ಬೆಂಗಳೂರು: ಉದ್ಯಮಿಯೊಬ್ಬರ ಮನೆ ಬಾಗಿಲು ಮುರಿದು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳ್ಳತನ ಮಾಡಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಪಟ್ಟಣದಲ್ಲಿ ನಡೆದಿದೆ.
ಪಟ್ಟಣದ ಉದ್ಯಮಿ ಲಾಲಾರಾಮ್ ಎಂಬುವವರು ದಸರಾ ಹಬ್ಬದ ಪೂಜೆ ಹಾಗೂ ಭಜನೆ ಕಾರ್ಯಕ್ರಮಕ್ಕೆ ಕುಟುಂಬ ಸಮೇತ ತೆರಳಿದ್ದರು. ಈ ವೇಳೆ ಮನೆ ಬಾಗಿಲು ಮುರಿದು 15 ಲಕ್ಷ ರೂಪಾಯಿ ಮೌಲ್ಯದ 355 ಗ್ರಾಂ ಚಿನ್ನಾಭರಣ, 5 ಕೆಜಿ ಬೆಳ್ಳಿ ಹಾಗೂ 70 ಸಾವಿರ ನಗದು ದೋಚಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ನೆಲಮಂಗಲ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Ad