ಬೆಂಗಳೂರು: ವಾಲ್ಮೀಕಿ ನಿಗಮ ಹಗರಣ ಸಂಬಂಧ ಜಾರಿ ನಿರ್ದೇಶನಾಲಯ ಅಧಿಕಾರಿಗಳ ವಿರುದ್ಧ ವಿಲ್ಸನ್ ಗಾರ್ಡನ್ ಠಾಣೆಯಲ್ಲಿ ದಾಖಲಾಗಿದ್ದ ಎಫ್‌ಐಆರ್‌ಗೆ ಹೈಕೋರ್ಟ್ ತಡೆ ನೀಡಿದೆ.
ನಾಗೇಂದ್ರ ಹೆಸರು ಹೇಳುವಂತೆ ನನಗೆ ಹಿಂಸೆ ಕೊಡುತ್ತಿದ್ದರು ಅಂತ ಇಡಿಯ ಇಬ್ಬರು ಅಧಿಕಾರಿಗಳ ವಿರುದ್ಧ ನಿಗಮದ ಮಾಜಿ ಎಂಡಿ ಕಲ್ಲೇಶ್ ದೂರು ದಾಖಲಿಸಿದ್ದರು. ಎಫ್‌ಐಆರ್ ರದ್ದು ಕೋರಿ ಇಡಿ ಹೈಕೋರ್ಟ್ ಮೆಟ್ಟಿಲೇರಿತ್ತು. ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ಪೀಠ ಎಫ್‌ಐಆರ್‌ಗೆ ತಡೆ ನೀಡಿ ಆಗಸ್ಟ್ 21ಕ್ಕೆ ವಿಚಾರಣೆ ಮುಂದೂಡಿದೆ.
ಸರ್ಕಾರದ ಪರ ವಾದ ಮಂಡಿಸಿದ ಎಜಿ ಶಶಿಕಿರಣ್ ಶೆಟ್ಟಿ, ಸಿಎಂ, ಡಿಸಿಎಂ ಹೆಸರೇಳಲು ಇಡಿ ಅಧಿಕಾರಿಗಳು ಸಾಕಷ್ಟು ಒತ್ತಡ ಹೇರಿದ್ದಾರೆ. ಇಡಿ ಕಚೇರಿಯ ಸಿಸಿಟಿವಿಯನ್ನು ವಶಕ್ಕೆ ಪಡೆಯಬೇಕು. ಆಗ ಎಲ್ಲವೂ ತಿಳಿಯಲಿದೆ ಎಂದು ವಾದಿಸಿದರು.

