ಬೆಂಗಳೂರು : ಬಿಸಿಲಿನಿಂದಾಗಿ ಈಗಾಗಲೇ ಇಡೀ ರಾಜ್ಯವೇ ತತ್ತರಿಸಿ ಹೋಗಿದೆ. ಮಾರ್ಚ್ 12 ರಿಂದ ಮೂರು ದಿನಗಳ ಕಾಲ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಹವಾಮಾನ ಇಲಾಖೆಯ ಪ್ರಕಾರ, ಬಂಗಾಳಕೊಲ್ಲಿ ವಾಯುಭಾರ ಕುಸಿತವಾಗುವ ಸಾಧ್ಯತೆ ಇದ್ದು, ಈ ಹಿನ್ನಲೆ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯಾಗುವ ಸಾದ್ಯತೆ ಇದೆ ಎಂದು ವರದಿಯಾಗಿದೆ.
ಇನ್ನು ವಿಜಯನಗರ, ತುಮಕೂರು, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಬಳ್ಳಾರಿ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿ, ಬಾಗಲಕೋಟೆಯಲ್ಲಿ ಒಣಹವೆ ಮುಂದುವರೆಯಲಿದೆ ಎಂದು ತಿಳಿಸಿದೆ.

