News Karnataka Kannada
Friday, May 10 2024
ಬೆಂಗಳೂರು

ಸೌಜನ್ಯ ಪ್ರಕರಣ ಮರು ತನಿಖೆ ನಡೆಸುವಂತೆ ಕರಾವಳಿ ಬಿಜೆಪಿ ಶಾಸಕರಿಂದ ಸಿಎಂಗೆ ಮನವಿ

There is no provision in state govt's law to re-investigate soujanya case: CM
Photo Credit : News Kannada

ಬೆಂಗಳೂರು: ಸೌಜನ್ಯ ಪ್ರಕರಣವನ್ನು ಮರು ತನಿಖೆಗೆ ಒಳಪಡಿಸುವಂತೆ ದ.ಕ ಮತ್ತು ಉಡುಪಿ ಜಿಲ್ಲೆಯ ಬಿಜೆಪಿ ಶಾಸಕರ ನಿಯೋಗ ಮುಖ್ಯಮಂತ್ರಿ ಸಿದ್ಧರಾಮಯ್ಯರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದೆ.

ಈ ಮನವಿಗೆ ಉತ್ತರಿಸಿದ ಮುಖ್ಯಮಂತ್ರಿ ಸಿದ್ಧರಾಮಯ್ಯ, ಸೌಜನ್ಯ ಪ್ರಕರಣವನ್ನು ಮರು ತನಿಖೆಗೆ ಒಳಪಡಿಸಲು ರಾಜ್ಯ ಸರಕಾರಕ್ಕೆ ಕಾನೂನಿನಲ್ಲಿ ಅವಕಾಶವಿರುವುದಿಲ್ಲ. ಈ ವಿಷಯವನ್ನು ಸೌಜನ್ಯ ಪೋಷಕರಿಗೆ ನಾನು ತಿಳಿಸಿದ್ದೇನೆ. ಈಗಾಗಲೇ ಕಾನೂನು ಸಲಹೆಯನ್ನು ನಾನು ಪಡೆದಿರುವುದರಿಂದ ಸೌಜನ್ಯಳ ಪೋಷಕರು ಮೇಲ್ಮನವಿ ಸಲ್ಲಿಸಬಹುದು ಅಥವಾ ಸಿಬಿಐ ಮೇಲ್ಮನವಿ ಸಲ್ಲಿಸಲು ಅವಕಾಶವಿರುತ್ತದೆ.

ನೀವು ಮನವಿ ನೀಡಿರುವ ಕಾರಣ ಇನ್ನೊಮ್ಮೆ ನಾನು ಕಾನೂನು ಸಲಹೆ ಪಡೆಯುವುದಾಗಿ ನಮಗೆ ಭರವಸೆ ನೀಡಿದ್ದಾರೆ ಎಂದು ಮನವಿ ನೀಡಿದ ಶಾಸಕರು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು