Bengaluru 26°C
Ad

ಪ್ರಜ್ವಲ್ ವಿರುದ್ಧ ಮೂರನೇ ಪ್ರಕರಣ: 1,691 ಪುಟಗಳ ಚಾರ್ಜ್‌ಶೀಟ್‌ ಸಲ್ಲಿಕೆ

ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಆರೋಪದ ಮೂರನೇ ಪ್ರಕರಣದಲ್ಲಿ ಎಸ್‌ಐಟಿ ಇಂದು ನ್ಯಾಯಾಲಯಕ್ಕೆ ಚಾರ್ಜ್‌ಶೀಟ್‌ ಸಲ್ಲಿಕೆ ಮಾಡಿದೆ.

ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಆರೋಪದ ಮೂರನೇ ಪ್ರಕರಣದಲ್ಲಿ ಎಸ್‌ಐಟಿ ಇಂದು ನ್ಯಾಯಾಲಯಕ್ಕೆ ಚಾರ್ಜ್‌ಶೀಟ್‌ ಸಲ್ಲಿಕೆ ಮಾಡಿದೆ.

ಜಿಲ್ಲಾ ಪಂಚಾಯಿತಿ ಸದಸ್ಯೆ ನೀಡಿದ್ದ ದೂರಿನ ಮೇರೆಗೆ ಸಂತ್ರಸ್ತೆಯ ಸೀರೆಯನ್ನು ಪ್ರಮುಖ ಸಾಕ್ಷ್ಯ ಮಾಡಿಕೊಂಡು, 120 ಸಾಕ್ಷಿಗಳು, 1,691 ಪುಟಗಳ ಸುದೀರ್ಘ ದೋಷಾರೋಪ ಪಟ್ಟಿಯನ್ನು ಎಸ್‌ಐಟಿ, ನ್ಯಾಯಾಲಯಕ್ಕೆ ಸಲ್ಲಿಸಿದೆ.

ಚಾರ್ಜ್‌ಶೀಟ್‌ನಲ್ಲಿ ಗನ್ ಪಾಯಿಂಟ್‌ನಲ್ಲಿ ಬೆದರಿಸಿ ಮಹಿಳೆ ಮೇಲೆ ಅತ್ಯಾಚಾರ ಎಸಗಲಾಗಿದೆ. ವಿಡಿಯೋ ಮಾಡಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ಪದೇ ಪದೇ ಅತ್ಯಾಚಾರ ವೆಸಗಿ ದೌರ್ಜನ್ಯ ನಡೆಸಲಾಗಿದೆ. ಸಂಸದ ಅನ್ನೋ ಭಯದಿಂದ ದೂರು ಕೊಡದೆ ಸುಮ್ಮನಿರೋದಾಗಿ ಸಂತ್ರಸ್ತೆ ಹೇಳಿಕೆ ನೀಡಿದ್ದಾರೆ.

Ad
Ad
Nk Channel Final 21 09 2023