Bengaluru 25°C
Ad

ತೃತೀಯ ಲಿಂಗಿಗಳಿಗೂ ಸಿಗಲಿದೆ ಗೃಹಲಕ್ಷ್ಮಿ ಯೋಜನೆಯ ಹಣ

ಮಹಿಳೆಯರಿಗೆ ಮಾತ್ರ ಮೀಸಲಾಗಿದ್ದ ಗೃಹಲಕ್ಷ್ಮಿ ಯೋಜನೆಯ ಹಣ ಇನ್ನು ಮುಂದೆ ತೃತೀಯ ಲಿಂಗಿಗಳಿಗೂ ಸಿಗಲಿದೆ.‌ ಜಿಲ್ಲಾಧಿಕಾರಿಗಳು ವಿತರಣೆ ಮಾಡಿರುವ ಐಡಿ ಕಾರ್ಡ್ ನೀಡಿ ಗೃಹಲಕ್ಷ್ಮಿ ಹಣಕ್ಕೆ ಅರ್ಜಿ ಸಲ್ಲಿಸಬಹುದು.

ಬೆಂಗಳೂರು: ಮಹಿಳೆಯರಿಗೆ ಮಾತ್ರ ಮೀಸಲಾಗಿದ್ದ ಗೃಹಲಕ್ಷ್ಮಿ ಯೋಜನೆಯ ಹಣ ಇನ್ನು ಮುಂದೆ ತೃತೀಯ ಲಿಂಗಿಗಳಿಗೂ ಸಿಗಲಿದೆ.‌ ಜಿಲ್ಲಾಧಿಕಾರಿಗಳು ವಿತರಣೆ ಮಾಡಿರುವ ಐಡಿ ಕಾರ್ಡ್ ನೀಡಿ ಗೃಹಲಕ್ಷ್ಮಿ ಹಣಕ್ಕೆ ಅರ್ಜಿ ಸಲ್ಲಿಸಬಹುದು.

Ad
300x250 2

ತೃತೀಯ ಲಿಂಗಿಗಳಿಗೆ ಹಣ ನೀಡಲು ಈಗಾಗಲೇ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಆದೇಶವಾಗಿದೆ. ಈ ತಿಂಗಳ ಕೊನೆಯ ಒಳಗಾಗಿ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಈ ತಿಂಗಳ ಒಳಗಡೆ ಅರ್ಜಿ ಸಲ್ಲಿಕೆಯಾದರೆ ಮುಂದಿನ ತಿಂಗಳೇ ತೃತೀಯ ಲಿಂಗಿಗಳ ಅಕೌಂಟ್​​​ಗೆ ಎರಡು ಸಾವಿರ ರೂಪಾಯಿ ಹಣ ಬರಲಿದೆ.

ರಾಜ್ಯದಲ್ಲಿ 40,000 ಹೆಚ್ಚು ತೃತೀಯ ಲಿಂಗಿಗಳಿದ್ದು ಅವರ ಅಭಿವೃದ್ಧಿಗೆ ಅಥವಾ ಜೀವನೋಪಾಯಕ್ಕೆ ಗೃಹಲಕ್ಷ್ಮಿ ಹಣ ಸಹಕಾರಿಯಾಗಲಿದೆ. ಬೆಂಗಳೂರು ಒನ್, ಗ್ರಾಮ ಒನ್ ಮತ್ತು ಸೈಬರ್ ಸೆಂಟರ್​​ಗಳಲ್ಲಿ ಅರ್ಜಿ ಸಲ್ಲಿಕೆ ಮಾಡಬಹುದು.

 

Ad
Ad
Nk Channel Final 21 09 2023
Ad