News Karnataka Kannada
Monday, May 06 2024
ಬೆಂಗಳೂರು

ಮತ್ತೊಂದು ವಿದ್ಯಾ ಸಂಸ್ಥೆಗೆ ಬಾಂಬ್ ಬೆದರಿಕೆ ಸಂದೇಶ !

Bmb
Photo Credit : News Kannada

 ಬೆಂಗಳೂರು: ನಗರದ ಮತ್ತೊಂದು ವಿದ್ಯಾ ಸಂಸ್ಥೆಗೆ ಬಾಂಬ್ ಬೆದರಿಕೆ ಬಂದಿದೆ. ಯಶವಂತಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕೇಂದ್ರೀಯ ವಿದ್ಯಾಲಯ ಒಂದರಲ್ಲಿ ಬಾಂಬ್ ಇಟ್ಟಿರೋದಾಗಿ ಬೆದರಿಕೆ ಬಂದಿದೆ.

Sahukarisrinuvasarao65@gmail.com ಮೇಲ್​​ನಿಂದ ಬೆದರಿಕೆ ಹಾಕಲಾಗಿದೆ. ಸ್ಕೂಲ್ ಒಳಗೆ ಬಾಂಬ್ ಇಟ್ಟಿದ್ದೀವಿ ಬೆಳಗ್ಗೆ 10:20ಕ್ಕೆ ಬ್ಲಾಸ್ಟ್ ಆಗಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ ಎನ್ನಲಾಗಿದೆ. ಬೆದರಿಕೆ ಮೇಲ್ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವ ಭದ್ರತಾ ಅಧಿಕಾರಿಗಳು, ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

ಆದರೆ ಅಲ್ಲಿ ಯಾವುದೇ ಸ್ಫೋಟಕ ವಸ್ತುಗಳು ಪತ್ತೆಯಾಗಿಲ್ಲ. ಈ ಹಿನ್ನೆಲೆಯಲ್ಲಿ ಹುಸಿ ಬಾಂಬ್ ಬೆದರಿಕೆ ಕೇಸ್ ದಾಖಲಿಸಿಕೊಂಡು ತನಿಕೆ ಆರಂಭಿಸಿದ್ದಾರೆ. ಕೇಂದ್ರೀಯ ವಿದ್ಯಾಲಯ ಪ್ರಿನ್ಸಿಪಾಲ್ ಅಮೃತಬಾಲ ಅವರು ಯಶವಂತಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು