15 ಶಾಲೆಗಳಿಗೆ ಬಾಂಬ್ ಬೆದರಿಕೆ: ಆಘಾತಕಾರಿ ವಿಚಾರ ಬಿಚ್ಚಿಟ್ಟ ಸುರೇಶ್ ಕುಮಾರ್

ಬೆಂಗಳೂರು: ನಗರದ 15ಕ್ಕೂ ಸ್ಕೂಲ್​ಗಳಿಗೆ ಬಾಂಬ್ ಬೆದರಿಕೆ ಬಂದಿದ್ದು, ಆತಂಕದ ವಾತಾವರಣ ನಿರ್ಮಾಣವಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಮಾಜಿ ಶಿಕ್ಷಣ ಸಚಿವ, ಹಾಲಿ ಶಾಸಕ ಸುರೇಶ್ ಕುಮಾರ್,  “ಮೇಲ್​ನಲ್ಲಿ ಉಗ್ರವಾದ ಬಗ್ಗೆ ಮತ್ತು ಮೂಲಭೂತವಾದದ ಬಗ್ಗೆ ಉಲ್ಲೇಖಿಸಿದ್ದಾರೆ” ಎಂದಿದ್ದಾರೆ.

ನನಗೆ ಶಾಲೆಗಳಿಗೆ ಬಾಂಬ್ ಬೆದರಿಕೆಯ ಮೇಲ್ ಬಂದಿದೆ ಎಂದು ಗೊತ್ತಾಗಿತ್ತು. ಎಲ್ಲಿ ಎಂದು ನೋಡಿದಾಗ ಯಲಹಂಕ ಶಾಲೆಗೂ ಬಂದಿದೆ ಎಂದು ತಿಳಿಯಿತು. ಬಾಂಬ್ ನಿಷ್ಕ್ರಿಯ ದಳ, ಶ್ವಾನ ದಳ ಬಂದು ಪರಿಶೀಲನೆ ನಡೆಸಿದೆ. ಕಳೆದ ಬಾರಿ ವಿದ್ಯಾರ್ಥಿಯೊಬ್ಬ ಬೆದರಿಕೆ ಮೇಲ್ ಮಾಡಿದ್ದ. ಈಗ ಬಂದಿರುವ ಮೇಲ್​ನಲ್ಲಿ ಉಗ್ರವಾದದ ಶಬ್ದಗಳನ್ನು ಬಳಕೆ ಮಾಡಲಾಗಿದೆ.

ಖರಿಜ್ಜಿಟಸ್​​ ಅಟ್ ಬೆಬಲ್ ಡಾಟ್ ಕಾಂ (Kharijjitas@bebble.com) ಎಂಬ ಮೇಲ್​ನಿಂದ ಬಂದಿದೆ ಎಂದು ಆಘಾತಕಾರಿ ಮಾಹಿತಿ ತಿಳಿಸಿದ್ದಾರೆ.

ಇನ್ನು ತುಮಕೂರಿನಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮಾತನಾಡಿದ್ದು, ನಿಮ್ಮ ಮಕ್ಕಳನ್ನ ಕೊಲ್ಲುತ್ತೇವೆ ಎಂದು ಮೇಲ್ ಕಳಿಸಿದ್ದಾರೆ. ನಾವು ಎಲ್ಲಿಂದ ಮೇಲ್ ಬಂದಿದೆ ಎಂದು ಪರಿಶೀಲನೆ ಮಾಡುತ್ತಿದ್ದೇವೆ. ಒಂದು ವೇಳೆ ಬಾಂಬ್ ಇದೆಯಾ ಅಂತ ವೆರಿಫೈ ಮಾಡ್ತಿದ್ದೇವೆ. ಮತಾಂತರ ಆಗಿ ಎನ್ನುವ ಸಂದೇಶ ಕೊಟ್ಟಿದ್ದಾರೆ. ಮತಾಂತರ ವಿಚಾರದಲ್ಲಿ ಕೆಲವೊಂದು ಮಾತನಾಡಿದ್ದಾರೆ ಎಂದು ಹೇಳಿದ್ದಾರೆ.

 

 

Ashitha S

Recent Posts

ಗೀತಾಂಜಲಿ ಸಿಲ್ಕ್, ಶಾಂತಿಸಾಗರ್ ಹೊಟೇಲ್‌ ಸಂಸ್ಥಾಪಕ ನೀರೆ ಬೈಲೂರು ಗೋವಿಂದ ನಾಯಕ್ ನಿಧನ

ಉಡುಪಿಯ ಪ್ರತಿಷ್ಠಿತ ಜವಳಿ ಮಳಿಗೆ ‘ಗೀತಾಂಜಲಿ ಸಿಲ್ಕ್’ ಮತ್ತು ಶಾಂತಿಸಾಗರ್ ಹೊಟೇಲ್‌ನ ಸಂಸ್ಥಾಪಕರಾದ ನೀರೆ ಬೈಲೂರು ಗೋವಿಂದ ನಾಯಕ್ (89)…

13 seconds ago

ಸ್ಥಳೀಯ ವಾಹನಗಳಿಗೆ ಟೋಲ್ ಕಡಿತ: ಸ್ಥಳೀಯರಿಂದ ಸಾಸ್ತಾನ ಟೋಲ್ ಗೇಟ್ ಗೆ ಮುತ್ತಿಗೆ

ಕಳೆದ ಹಲವು ದಿನಗಳಿಂದ ಸ್ಥಳೀಯ ವಾಹನಗಳಿಗೆ ಫಾಸ್ಟ್ ಟ್ಯಾಗ್ ನಲ್ಲಿ ಶುಲ್ಕ ಕಡಿತವಾಗುತ್ತಿರುವುದನ್ನು ವಿರೋಧಿಸಿ ಸ್ಥಳೀಯರು ಸಾಸ್ತಾನ ಟೋಲ್ ಗೇಟ್…

16 mins ago

ವಿಮಾನದ ಎಂಜಿನ್‌ನಲ್ಲಿ ಏಕಾಏಕಿ ಬೆಂಕಿ : ತುರ್ತು ಭೂ ಸ್ಪರ್ಶ

ಕೆಂಪೇಗೌಡ ವಿಮಾನ ನಿಲ್ದಾಣದಿಂದ ಕೇರಳದ ಕೊಚ್ಚಿಗೆ ಹೊರಟಿದ್ದ ವಿಮಾನದ ಎಂಜಿನ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಪರಿಣಾಮ ಏರ್ ಇಂಡಿಯಾ ವಿಮಾನವು…

29 mins ago

ಅಕ್ರಮ ಕಲ್ಲು ಗಣಿಗಾರಿಕೆ ಆರೋಪ ಬಿಜೆಪಿ ಮುಖಂಡನ ಬಂಧನ : ಠಾಣೆಗೆ ಹರೀಶ್ ಪೂಂಜ ಮುತ್ತಿಗೆ

ಮೇಲಂತಬೆಟ್ಟು ಅಕ್ರಮ ಕೋರೆಗೆ ತಹಶೀಲ್ದಾರ್ ನೇತೃತ್ವದಲ್ಲಿ ದಾಳಿ ನಡೆಸಿದ್ದು, ಶಾಸಕ ಹರೀಶ್ ಪೂಂಜ ಆಪ್ತ ಬಿಜೆಪಿ ಯುವ ಮೋರ್ಚಾ ಮುಖಂಡ…

51 mins ago

ರಾತ್ರಿ 1:30 ಆದರೂ ನಿಲ್ಲದ ರೆಡ್​ ಆರ್ಮಿ ಹರ್ಷ; ವಿಡಿಯೋ ಮಾಡಿ ಶೇರ್​ ಮಾಡಿದ ಕೊಹ್ಲಿ

ರಾಯಲ್ ಚಾಲೆಂಜರ್ಸ್ ಬೆಂಗಳೂರು ಐಪಿಎಲ್ 2024ರಲ್ಲಿ ಅದ್ಭುತವನ್ನೇ ಮಾಡಿದೆ. ಸತತ ಪಂದ್ಯಗಳಲ್ಲಿ ಸೋತು ಒಂದು ಹಂತದಲ್ಲಿ ಪಾಯಿಂಟ್ ಪಟ್ಟಿಯಲ್ಲಿ ಕೊನೆಯ…

56 mins ago

ಪ್ರಜ್ವಲ್ ರೇವಣ್ಣ ವಿರುದ್ಧ ಅರೆಸ್ಟ್ ವಾರೆಂಟ್

ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ತಲೆಮರೆಸಿಕೊಂಡಿದ್ದಾರೆ. ಅವರ ವಿರುದ್ಧ ಶನಿವಾರ ಅರೆಸ್ಟ್ ವಾರಂಟ್…

1 hour ago