ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಫೋಟಕ ತಿರುವು ಸಿಕ್ಕಿದೆ. ಈಗಾಗಲೇ ದರ್ಶನ್ ಮತ್ತು ಗ್ಯಾಂಗ್ ಜೈಲಿನಲ್ಲಿ ಬಂಧಿಯಾಗಿದ್ದಾರೆ. ಚಾರ್ಜ್ ಶೀಟ್ನಲ್ಲಿ ರೇಣುಕಾಸ್ವಾಮಿ ಕೊಲೆಯಲ್ಲಿ ಬಂಧಿತರಾಗಿರುವ ಮೂವರು ಆರೋಪಿಗಳು ಭಾಗಿಯಾಗಿಲ್ಲ ಎಂಬ ಅಂಶ ಬೆಳಕಿಗೆ ಬಂದಿದೆ. ಚಾರ್ಜ್ಶೀಟ್ನಲ್ಲಿ ಕೊಲೆಯಲ್ಲಿ ಮೂವರು ಆರೋಪಿಗಳ ಪಾತ್ರವಿಲ್ಲ ಎಂದು ಉಲ್ಲೇಖಿಸಲಾಗಿದೆ.
ನಿಖಿಲ್ ನಾಯ್ಕ್, ಕೇಶವಮೂರ್ತಿ ಹಾಗೂ ಕಾರ್ತಿಕ್ ಈ ಮೂವರು ಆರಂಭದಲ್ಲಿ ಕಾಮಾಕ್ಷಿಪಾಳ್ಯ ಪೊಲೀಸರಿಗೆ ತಾವೇ ರೇಣುಕಾಸ್ವಾಮಿಯನ್ನು ಕೊಲೆ ಮಾಡಿದ್ದಾಗಿ ಸೆರೆಂಡರ್ ಆಗಿದ್ದರು. ಆದರೆ ಈಗ ಈ ಕೊಲೆಯಲ್ಲಿ ಮೂವರ ಪಾತ್ರ ಇಲ್ಲ ಎಂಬುದು ಸಾಬೀತಾಗಿದೆ. ನಿಖಿಲ್ ನಾಯ್ಕ್, ಕೇಶವಮೂರ್ತಿ, ಕಾರ್ತಿಕ್ ಮೇಲೆ ಕೊಲೆ ಕೇಸ್ ಇಲ್ಲದಿದ್ದರೂ, ಚಾರ್ಜ್ಶೀಟ್ನಲ್ಲಿ 201 ಅಡಿ ಸಾಕ್ಷಿ ನಾಶ ಆರೋಪವಿದೆ. ಮೂವರ ವಿರುದ್ಧ ಸಾಕ್ಷ್ಯ ನಾಶ ಮಾಡಿದ ಆರೋಪವನ್ನು ಪೊಲೀಸರು ಪ್ರಸ್ತಾಪ ಮಾಡಿದ್ದಾರೆ. ಸಾಕ್ಷಿ ನಾಶ ಹಾಗೂ ಪೊಲೀಸರಿಗೆ ಸುಳ್ಳು ಮಾಹಿತಿ ನೀಡಿದ್ದಾಗಿ ಉಲ್ಲೇಖಿಸಿದ್ದಾರೆ.

