Bengaluru 23°C

ರಾಜ್ಯದಲ್ಲಿ ಜೂನ್ 6ರಂದು ಗುಡುಗು ಸಹಿತ ಮಳೆ ಸಾಧ್ಯತೆ: ಹವಾಮಾನ ಇಲಾಖೆ 

ಕರ್ನಾಟಕದ 7 ಜಿಲ್ಲೆಗಳಲ್ಲಿ ಇಂದು ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್‌ 10ರಂದು ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಬೆಂಗಳೂರು:  ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಜೂನ್ 6ರಂದು ಗುಡುಗು ಸಹಿತ ಮಳೆಯಾಗುವ ಸಾಧ್ಯತೆ  ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.


ಜೂನ್‌ 7ರಂದು ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಹೆಚ್ಚಿನ ಸ್ಥಳಗಳಲ್ಲಿ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗಲಿದೆ.


ಇನ್ನು ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ಮಂಡ್ಯ, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.


ಮುಂದಿನ 48 ಗಂಟೆಗಳಲ್ಲಿ ಕರ್ನಾಟಕದ ಒಳನಾಡಿನಲ್ಲಿ ಗರಿಷ್ಠ ಮತ್ತು ಕನಿಷ್ಠ ತಾಪಮಾನವು 2-3 ಡಿಗ್ರಿ ಸೆಲ್ಸಿಯಸ್‌ನಿಂದ ಕ್ರಮೇಣ ಕಡಿಮೆಯಾಗುವ ಸಾಧ್ಯತೆಯಿದೆ.


ಮುಂದಿನ 48 ಗಂಟೆಗಳ ಕಾಲ ಬೆಂಗಳೂರು ಸುತ್ತಮುತ್ತೆಲಿನ ಭಾಗದಲ್ಲಿ ಸಾಮಾನ್ಯವಾಗಿ ಮೋಡ ಕವಿದ ಆಕಾಶ. ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಂಭವವಿದೆ.


ಜೂನ್ 5 ರಿಂದ ಜೂನ್ 13 ರವರೆಗೆ ಕಾವೇರಿ ಜಲಾನಯನ ಪ್ರದೇಶ ಹಾಗೂ ಕೃಷ್ಣಾ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಸಾಧಾರಣ ಮಳೆ ಸುರಿಯಲಿದೆ. ಜೂನ್ 6 ರಿಂದ 11 ರವರೆಗೆ ಅಲ್ಲಲ್ಲಿ ಭಾರಿ ಮಳೆಯಾಗುವ ಸಾಧ್ಯತೆಗಳಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.


ಬೀದರ್, ಧಾರವಾಡ, ಗದಗ, ಹಾವೇರಿ, ಯಾದಗಿರಿ ಜಿಲ್ಲೆಗಳಲ್ಲಿ ಹಲವೆಡೆ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ವಿಜಯನಗರ, ತುಮಕೂರು ಸೇರಿದಂತೆ ಹಲವು ಕಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.


Nk Channel Final 21 09 2023