Ad

ರಾಜ್ಯದ ವಿವಿಧೆಡೆ ಗುಡುಗು ಸಹಿತ ರಣಮಳೆಯಾಗುವ ಸಾಧ್ಯತೆ

ಇಂದು ಕರ್ನಾಟಕದ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ರಾಜ್ಯದ ವಿವಿಧೆಡೆ ಗುಡುಗು ಸಹಿತ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

ಬೆಂಗಳೂರು: ಇಂದು ಕರ್ನಾಟಕದ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ರಾಜ್ಯದ ವಿವಿಧೆಡೆ ಗುಡುಗು ಸಹಿತ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

Ad
300x250 2

ದಕ್ಷಿಣ ಒಳನಾಡಿನ ಪ್ರತ್ಯೇಕವಾಗಿ ಸಾಕಷ್ಟು ವ್ಯಾಪಕವಾದ ಹಗುರ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನಲ್ಲಿ ಮಧ್ಯಮ ಮಳೆಯಾಗುವ ನಿರೀಕ್ಷೆಯಿದ್ದು, ಬೆಳಗಾವಿಯಲ್ಲಿ ಭಾರೀ ಮಳೆಯಾಗುವ ಎಚ್ಚರಿಕೆ ನೀಡಲಾಗಿದೆ.

ಕರಾವಳಿಯಲ್ಲಿ ವ್ಯಾಪಕ ಸಾಧಾರಣದಿಂದ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ಪ್ರತ್ಯೇಕವಾಗಿ ಚದುರಿದ ಸ್ಥಳಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಬೆಂಗಳೂರು ಸುತ್ತಮುತ್ತ ವ್ಯಾಪಕವಾಗಿ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಉಷ್ಣಾಂಶ 31 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಗುಡುಗು, ಮಿಂಚು ಸಹಿತ ಭಾರೀ ಮಳೆಯೊಂದಿಗೆ ಗಾಳಿಯು 30-40 ಕಿ.ಮೀ ವೇಗದಲ್ಲಿ ಬೀಸಲಿದೆ. ಹೀಗಾಗಿ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಿಗೆ ಐಎಂಡಿ ರೆಡ್ ಹಾಗೂ ಆರೆಂಜ್‌ ಅಲರ್ಟ್ ಘೋಷಿಸಿದೆ. ಬೆಳಗಾವಿ, ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ನೀಡಲಾಗಿದೆ. ಕರಾವಳಿಯಲ್ಲಿ ಬಿರುಗಾಳಿ ಬೀಸುವ ಕಾರಣಕ್ಕೆ ಜೂನ್‌ 24ರವರೆಗೆ ಮೀನುಗಾರಿಕೆಗೆ ಹೋಗದಂತೆ ಸೂಚನೆ ನೀಡಲಾಗಿದೆ.

Ad
Ad
Nk Channel Final 21 09 2023
Ad